ಮೈಸೂರು: ಕೊರೊನಾದಿಂದ ಗುಣಮುಖರಾದ 461 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ 455 ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದೆ. ಕೊರೊನಾ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದಾರೆ.
ಸಂಪರ್ಕಿತರಿಂದ 253, ಪ್ರಯಾಣದ ಹಿನ್ನೆಲೆಯುಳ್ಳವರು 135, ಐಎಲ್ಐ 56, ಎಸ್ಎಆರ್ಐನಿಂದ 11 ಮಂದಿ ಸೇರಿದಂತೆ 455 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮೈಸೂರಿನಲ್ಲಿ ಒಟ್ಟಾರೆ ಈವರೆಗೆ 7,312 ಮಂದಿ ಕೊರೊನಾ ಸೋಂಕಿತರ ಪೈಕಿ, 3,208 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 3,868 ಮಂದಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 235 ಮಂದಿಯ ಇಲ್ಲಿಯವರೆಗೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.