ಮೈಸೂರು: ಇಂದು ಜಿಲ್ಲೆಯಲ್ಲಿ 151 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು , 496 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಕೋವಿಡ್ ಪ್ರಕರಣಗಳ ವಿವರ:
ಈ ದಿನ ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45,193 ಕ್ಕೆ ಏರಿಕೆಯಾಗಿದೆ.
ಗುಣಮುಖ :
ಜಿಲ್ಲೆಯಲ್ಲಿಂದು ಸೋಂಕಿನಿಂದ 496 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 37,319 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 6,947 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಮಾಹಿತಿ :
ಇಂದು ಒಂದೇ ದಿನ ಜಿಲ್ಲೆಯಲ್ಲಿ ಕೊರೊನಾದಿಂದ 4 ಜನ ಮೃತಪಟ್ಟಿದ್ದು, ಆ ಮೂಲಕ ಸಾವನ್ನಪ್ಪಿದವರ ಸಂಖ್ಯೆ 927 ಕ್ಕೆ ಏರಿಕೆಯಾಗಿದೆ.