ಮೈಸೂರು: ಬ್ರಾಡ್ ವೇ ರಸ್ತೆ ಅಗಲೀಕರಣಕ್ಕಾಗಿ ನಂಜನಗೂಡು ಪಟ್ಟಣದಲ್ಲಿ ರಸ್ತೆ ಅತಿಕ್ರಮ ಮಾಡಿಕೊಂಡಿದ್ದ 50 ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಯಿತು.
ಈ ಮೊದಲೇ ನೋಟಿಸ್ ನೀಡಿದ್ದರೂ ಕೂಡ ಅಂಗಡಿ ಮಾಲೀಕರು ಸ್ಪಂದಿಸದ ಹಿನ್ನೆಲೆಯಲ್ಲಿ, ನಗರಸಭೆ ಅಧಿಕಾರಿಗಳ ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆಗಿಳಿಯಲಾಯಿತು.
ನಗರಸಭೆ ಆಯುಕ್ತ ಕರಿಬಸವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಅಂಗಡಿ ಮಾಲೀಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.