ಮೈಸೂರು: ಇಂದು 51 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 321ಕ್ಕೆ ಏರಿಕೆಯಾಗಿದೆ.
ಕೆಎಸ್ಆರ್ಪಿ ಪೊಲೀಸರ (ಸೋಂಕಿತರು) ಪ್ರಾಥಮಿಕ ಸಂಪರ್ಕದಲ್ಲಿದ್ದ 21 ಮಂದಿ ಸೇರಿದಂತೆ ಇಂದು ಒಂದೇ ದಿನ 51 ಪ್ರಕರಣ ದಾಖಲಾಗಿದೆ. ಸೋಂಕಿನಿಂದ ಗುಣಮುಖರಾದ 13 ಮಂದಿ ಇಂದು ಸಂಜೆ ಬಿಡುಗಡೆ ಆಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 321 ಪ್ರಕರಣಗಳ ಪೈಕಿ 191 ಮಂದಿ ಗುಣಮುಖರಾಗಿ ಮನೆ ಸೇರಿದ್ದು, 127 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 20,531 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 20,210 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.