ಮೈಸೂರು: ಜಿಲ್ಲೆಯಲ್ಲಿ ಇಂದು ಒಂದೇ ದಿನ 597 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 5 ಜನ ಸಾವನ್ನಪ್ಪಿದಾರೆ.
ಇಂದು 289 ಸೋಂಕಿತ ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ದಿನದಿಂದ ದಿನಕ್ಕೆ ಗುಣಮುಖರಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11,132 ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, ಅದರಲ್ಲಿ 6,764 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, ಇನ್ನುಳಿದ 4,059 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟು 309 ಮಂದಿ ಜಿಲ್ಲೆಯಲ್ಲಿ ಮರಣ ಹೊಂದಿದ್ದಾರೆ.
ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡಲಾಗುತ್ತಿದೆ ಜೊತೆಗೆ ಆಸ್ಪತ್ರೆಯಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.