ಮೈಸೂರು: ಜಿಲ್ಲೆಯಲ್ಲಿ ಈ ದಿನ ಹೊಸದಾಗಿ 626 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು , 1,018 ಗುಣಮುಖರಾಗಿದ್ದಾರೆ.
ಕೋವಿಡ್ ಪ್ರಕರಣಗಳ ವಿವರ:
ಇಂದು ಪತ್ತೆಯಾಗಿರವ ಕೊರೊನಾ ಪ್ರರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29,303 ಕ್ಕೆ ಏರಿಕೆಯಾಗಿದೆ.
ಗುಣಮುಖ:
ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 1,018 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 23,432 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 5,192 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಮಾಹಿತಿ:
ಈ ದಿನ ಜಿಲ್ಲೆಯಲ್ಲಿ 12 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 679 ಕ್ಕೆ ಏರಿಕೆಯಾಗಿದೆ.