ಮೈಸೂರು: ಮೈಸೂರಿನಲ್ಲಿ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮ ಹಾಗೂ ಸಡಗರದಿಂದ ನಡೆಸಲಾಯಿತು.
ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ಧ್ವಜಾರೋಹಣ ನೆರವೇರಿಸಿದರು, ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿ ಧ್ವಜಾರೋಹಣ ನೆರವೇರಿಸಿದ್ದು ವಿಶೇಷವಾಗಿತ್ತು. ನಂತರ ತೆರೆದ ಜೀಪಿನಲ್ಲಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಮೌಂಟೆಡ್, ಕೆಎಸ್ಆರ್ಪಿ, ಸಿಎಆರ್, ಡಿಎಆರ್ ಸೇರಿದಂತೆ 24 ತುಕಡಿಗಳು ಆಕರ್ಷಕ ಪಥ ಸಂಚಲನಗಳಿಂದ ನಡೆಸಲಾಯಿತು. 650 ವಿದ್ಯಾರ್ಥಿಗಳಿಂದ ಸಾಮಾಜಿಕ ಪಿಡುಗು ತೊಲಗಿಸುವಂತ ನೃತ್ಯ ಏರ್ಪಡಿಸಿದ್ದು ಆಕರ್ಷಣೆಯಾಗಿತ್ತು.
ಗೈರಾದ ಜನಪ್ರತಿನಿಧಿಗಳು: ಶಾಸಕರಾದ ತನ್ವೀರ್ ಸೇಠ್, ಎಲ್.ನಾಗೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಬಿಟ್ಟು ಉಳಿದ ಜನಪ್ರತಿನಿಧಿಗಳು ಗೈರಾಗಿದ್ದರು.