ETV Bharat / state

ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ.. ಪೊಲೀಸ್ ಕಮಿಷನರ್ - Curfew implemented in mysore

ಇದೀಗ ಆ ಆದೇಶವನ್ನು ತಿದ್ದುಪಡಿ ಮಾಡಿ ಇಂದಿನಿಂದ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿ ಮಾಡಿದ್ದು, ಮುಂದಿನ ಆದೇಶ ಬರುವವರೆಗೂ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದರು..

Chandragupta
Chandragupta
author img

By

Published : Jul 22, 2020, 3:32 PM IST

ಮೈಸೂರು : ಕೊರೊನಾ ಹರಡುವಿಕೆ ತಡೆಗೆ ಸಂಜೆ 6 ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿತ್ತು. ಈ ಆದೇಶವನ್ನು ತಿದ್ದುಪಡಿ ಮಾಡಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿದೆ ಎಂದು ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ ತಿಳಿಸಿದ್ದಾರೆ.

ಕೊರೊನಾ ಸೋಂಕಿತ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಜುಲೈ 3ರಂದು ಸಂಜೆ 6ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿ ಮಾಡಿ ಅನಗತ್ಯ ಸಂಚಾರ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆದೇಶ ಹೊರಡಿಸಿತ್ತು.

ಇದೀಗ ಆ ಆದೇಶವನ್ನು ತಿದ್ದುಪಡಿ ಮಾಡಿ ಇಂದಿನಿಂದ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿ ಮಾಡಿದ್ದು, ಮುಂದಿನ ಆದೇಶ ಬರುವವರೆಗೂ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದರು.

ಈ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತು ಪಡಿಸಿ ಉಳಿದಂತೆ ಅನಾವಶ್ಯಕ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.