ETV Bharat / state

ಸಾಲಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ - ಸಾಲಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ

ಸಾಲ ತೀರಿಸಲಾಗದೆ ಮನನೊಂದಿದ್ದ ಮಂಜುನಾಥ್, ತಮ್ಮ ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಪಿರಿಯಾಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ರೈತ ಆತ್ಮಹತ್ಯೆ
ರೈತ ಆತ್ಮಹತ್ಯೆ
author img

By

Published : May 30, 2022, 11:36 AM IST

ಮೈಸೂರು : ಸಾಲಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ನಡೆದಿದೆ. ನಾಗೇಗೌಡರ ಎಂಬುವರ ಪುತ್ರ ಮಂಜುನಾಥ್ (47) ಎಂಬುವರು ಸಾವಿಗೀಡಾದ ರೈತ.

ಮಂಜುನಾಥ್​ಗೆ 2.16 ಎಕರೆ ಜಮೀನಿದೆ. ಕೊಲ್ಲೂರು ಪಿಎಸ್ಎಸ್ಎನ್​ಬಿ ಸೇರಿದಂತೆ ಹಲವೆಡೆ 18 ಲಕ್ಷ ರೂ.ನಷ್ಟು ಸಾಲ ಮಾಡಿಕೊಂಡಿದ್ದಾರೆ. ಈ ಹಿಂದೆ ಬೆಳೆದ ಬೆಳೆ ಸಹ ಸರಿಯಾಗಿ ಬಾರದೆ ನಷ್ಟ ಅನುಭವಿಸಿದ್ದರು.

ಸಾಲ ತೀರಿಸಲಾಗದೆ ಮನನೊಂದಿದ್ದ ಮಂಜುನಾಥ್, ತಮ್ಮ ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಪಿರಿಯಾಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ನೀರಿನ ಹೊಂಡದಲ್ಲಿ ಬಿದ್ದು ಯುವತಿ, ಬಾಲಕಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.