ಮೈಸೂರು : ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ. ಕೃಷ್ಣಾ ಬಾಯಿ ತುಕಾರಾಂ ಪಡ್ಕೆ (25) ಮೃತರು. ಇವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಎಸ್ಗಳ್ಳಿ ಗ್ರಾಮದವರು. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಶಾನುಭೋಗನಹಳ್ಳಿ ಗ್ರಾಮದಲ್ಲಿ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.
ಕಳೆದ ತಿಂಗಳು ಹನೂರು ಅರಣ್ಯ ಇಲಾಖೆಯಲ್ಲಿ ಫಾರೆಸ್ಟ್ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಬೆಳಗಾವಿ ಮೂಲದ ಸುಭಾಷ್ ಬೊಂಸ್ಲೆ ಜೊತೆ ವಿವಾಹವಾಗಿದ್ದರು. ನಾಲ್ಕು ದಿನದ ಹಿಂದೆಷ್ಟೇ ಕೆಲಸಕ್ಕೆ ಹಾಜರಾಗಿದ್ದ ಕೃಷ್ಣಾ ಬಾಯಿ, ಬಿಳಿಕೆರೆಯ ತಮ್ಮ ನಿವಾಸದ ಕೊಠಡಿಯಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ತಾಯಿಯೊಂದಿಗೆ ವಾಸವಿದ್ದರು ಎಂದು ತಿಳಿದು ಬಂದಿದೆ.
ಘಟನೆಯ ವಿವರ: ಶನಿವಾರ ಕೃಷ್ಣಾ ಬಾಯಿ ಮತ್ತವರ ತಾಯಿ ಮನೆಯಲ್ಲೇ ಇದ್ದರು. ಬೆಳಗ್ಗೆಯಿಂದಲೇ ಯಾರೊಂದಿಗೋ ಮೊಬೈಲ್‌ನಲ್ಲಿ ಜೋರಾಗಿ ಮಾತನಾಡುತ್ತಿದ್ದರು. ನಂತರ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಅನೇಕ ಬಾರಿ ಕೂಗಿದರೂ ಬಾಗಿಲು ಓಪನ್ ಮಾಡಿದಿರುವುದನ್ನು ಕಂಡು ಏನೋ ಅನಾಹುತ ಆಗಿರಬೇಕೆಂದು ಅಕ್ಕ ಪಕ್ಕದವರ ನೆರವಿನಿಂದ ಬಾಗಿಲು ಒಡೆದು ನೋಡಿದಾಗ ಕಿಟಕಿಯ ಸರಳಿಗೆ ಬಟ್ಟೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ದೇಹ ಪತ್ತೆಯಾಗಿತ್ತು.
ಇದನ್ನೂ ಓದಿ : ಬೆಂಗಳೂರು: ಗೆಳೆಯನನ್ನು ಭೇಟಿಯಾಗಲು ದುಬೈನಿಂದ ಬಂದ ಏರ್ಲೈನ್ಸ್ ಗಗನಸಖಿ ಅನುಮಾನಾಸ್ಪದ ಸಾವು
ಈ ಕುರಿತು ತಕ್ಷಣ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು, ತಹಶೀಲ್ದಾರ್ ಡಾ.ಅಶೋಕ್ ಸಮ್ಮುಖದಲ್ಲಿ ಮೃತ ದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. ಬಿಳಿಕೆರೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಚಿಕ್ಕಸ್ವಾಮಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಹಶೀಲ್ದಾರ್ ಹೇಳಿದ್ದೇನು?: "ಘಟನೆ ಬಗ್ಗೆ ಪತಿ ಸುಭಾಷ್ ಬೋಸ್ಲೆ ಹಾಗೂ ಅಥಣಿಯಲ್ಲಿರುವ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಅವರು ಬಂದ ನಂತರವಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಲಿದೆ" ಎಂದು ತಹಶೀಲ್ದಾರ್ ಡಾ.ಅಶೋಕ್ ತಿಳಿಸಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಬಿಳಿಕೆರೆ ನಾಡ ಕಚೇರಿ ಉಪ ತಹಶೀಲ್ದಾರ್ ಅರುಣ್ ಸಾಗರ್ ಹಾಗೂ ಸಹೋದ್ಯೋಗಿಗಳು ಸ್ಥಳಕ್ಕೆ ಭೇಟಿ ನೀಡಿ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ: ಗುಡಿಸಲಿಗೆ ಬೆಂಕಿ: ಸುಖ ನಿದ್ರೆಯಲ್ಲಿದ್ದ ಮೂವರು ಮಕ್ಕಳು, ದಂಪತಿ ದಾರುಣ ಸಾವು
ಏರ್ಲೈನ್ಸ್ ಗಗನಸಖಿ ಸಾವು: ನಿನ್ನೆ ಬೆಂಗಳೂರಿನ ಕೋರಮಂಗಲದ 8ನೇ ಬ್ಲಾಕ್ನಲ್ಲಿ ಗೆಳೆಯನನ್ನು ಭೇಟಿ ಮಾಡಲು ದುಬೈನಿಂದ ಬಂದಿದ್ದ ಯುವತಿಯೊಬ್ಬಳು ಅಪಾರ್ಟ್ಮೆಂಟ್ ಮೇಲಿನಿಂದ ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ಪ್ರತಿಷ್ಠಿತ ಏರ್ಲೈನ್ಸ್ನಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ ಹಿಮಾಚಲ ಪ್ರದೇಶ ಮೂಲದ ಅರ್ಚನಾ ಧಿಮಾನ್ (28) ರೇಣುಕಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು.
ಇದನ್ನೂ ಓದಿ: ಸ್ನೇಹಿತನ ಪತ್ನಿ ಮೇಲೆ ಮೋಹ, ಮದುವೆ: ನಿರ್ಲಕ್ಷ್ಯ ಮಾಡಿದಳೆಂದು ಆಕೆಯ ಮಗನನ್ನೇ ಕೊಂದ