ETV Bharat / state

ಮೈಸೂರು: ಸೌತ್ ಇಂಡಿಯನ್ ಪೇಪರ್ ಮಿಲ್​ನಲ್ಲಿ ಕಾಣಿಸಿಕೊಂಡ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತು ಭಸ್ಮ - ಲಕ್ಷಾಂತರ ಮೌಲ್ಯದ ಪೇಪರ್​ ಭಸ್ಮ

ಸೌತ್ ಇಂಡಿಯನ್ ಪೇಪರ್ ಮಿಲ್​ಗೆ ಬೆಂಕಿ ತಗುಲಿದ್ದು, ಲಕ್ಷಾಂತರ ಮೌಲ್ಯದ ಪೇಪರ್​ ಬೆಂಕಿಗಾಹುತಿಯಾಗಿದೆ.

fire broke out in a South Indian paper mill  ಸೌತ್ ಇಂಡಿಯನ್ ಪೇಪರ್ ಮಿಲ್  South Indian paper mill in mysore  ಲಕ್ಷಾಂತರ ಮೌಲ್ಯದ ಪೇಪರ್​ ಭಸ್ಮ  ಸೌತ್ ಇಂಡಿಯನ್ ಪೇಪರ್ ಮಿಲ್​ಗೆ ಬೆಂಕಿ
ಮೈಸೂರಿನ ಸೌತ್ ಇಂಡಿಯನ್ ಪೇಪರ್ ಮಿಲ್​ನಲ್ಲಿ ಕಾಣಿಸಿಕೊಂಡ ಬೆಂಕಿ
author img

By ETV Bharat Karnataka Team

Published : Nov 11, 2023, 9:19 AM IST

Updated : Nov 11, 2023, 9:59 AM IST

ಮೈಸೂರಿನ ಸೌತ್ ಇಂಡಿಯನ್ ಪೇಪರ್ ಮಿಲ್​ನಲ್ಲಿ ಕಾಣಿಸಿಕೊಂಡ ಬೆಂಕಿ

ಮೈಸೂರು : ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ಇಲ್ಲಿನ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಸೌತ್ ಇಂಡಿಯಾ ಪೇಪರ್ ಮಿಲ್​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುದ್ದಿ ತಿಳಿದಾಕ್ಷಣ ಅಗ್ನಿಶಾಮಕ ದಳದವರು ತಕ್ಷಣ ಘಡನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ನಂಜನಗೂಡು ಬಳಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಸೌತ್ ಇಂಡಿಯಾ ಪೇಪರ್ ಮಿಲ್ ಕಾರ್ಖಾನೆಯ ಬಳಿ ಪೇಪರ್ ಮಿಲ್ ಕಾರ್ಖಾನೆಯ ಗೋಡಾನ್​ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಗೊಡೌನ್​ನಲ್ಲಿ ಇದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿದೆ.

ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಸುಮಾರು 4 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ಅಗ್ನಿಶಾಮಕ ಅಧಿಕಾರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಕಾರ್ಖಾನೆಯ ಬಳಿ ಇರುವ ಪೇಪರ್ ಗೊಡೌನ್​ನಲ್ಲಿ ಶನಿವಾರ ಬೆಳಗಿನಜಾವ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಸಿಕೊಂಡಿದೆ ಎಂದು ಶಂಕಿಸಲಾಗಿದೆ ಎಂದು ಹೇಳಿದರು. ಈ ಘಟನೆ ಕುರಿತು ನಂಜನಗೂಡು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ದೆಹಲಿ - ಜೈಪುರ್​ ಎಕ್ಸ್​ಪ್ರೆಸ್​ ಹೈವೇಯಲ್ಲಿ ಹೊತ್ತಿ ಉರಿದ ಬಸ್​: ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ

Last Updated : Nov 11, 2023, 9:59 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.