ಮೈಸೂರು: ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಕಂದಮ್ಮ ಗಾಯಗೊಂಡಿರುವ ಘಟನೆ ನಡೆದಿದೆ.
ಕಳಲೆ ಗ್ರಾಮದ ನಂಜುಂಡನಾಯಕ ಎಂಬುವವರ ಮಗಳಾದ ಪೂರ್ಣಿ(3) ಮೇಲೆ ಮನೆ ಗೋಡೆ ಕುಸಿದುಬಿದ್ದಿದೆ. ಗಾಯಗೊಂಡಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಮಾಹಿತಿ ತಿಳಿದು ನಂಜನಗೂಡು ತಹಶೀಲ್ದಾರ್ ಶಿವಮೂರ್ತಿ ಹಾಗೂ ರೆವಿನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ರಕ್ಷಣೆಯಾದ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ. ಹಾನಿಯಾದ ಮನೆ ಮರು ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇದನ್ನೂ ಓದಿ:ಮನೆ ಗೋಡೆ ಕುಸಿದು ಮಹಿಳೆ ಸಾವು