ಮೈಸೂರು: ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಹುಣಸೂರಿನ ಹುಸೇನ್ ಪುರ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಹುಣಸೂರು ತಾಲೂಕಿನ ಹುಸೇನ್ ಪುರ ಗ್ರಾಮದ ಪ್ರಸನ್ನ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಆ ಹಸುವನ್ನು ತಿಂದು ಹಾಕಿದೆ. ಈ ಚಿರತೆ ದಾಳಿಯಿಂದ ಕಂಗೆಟ್ಟಿರುವ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಆಗಮಿಸಿದ ಹಿನ್ನೆಲೆ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.