ಮೈಸೂರು: ದೊಡ್ಡ ಕವಲಂದೆ ಗ್ರಾಮ ದ ರೈಲ್ವೆ ನಿಲ್ದಾಣದ ಬಳಿ ರೈಲು ಹಳಿಗೆ ತಲೆ ಕೊಟ್ಟು ಮೃತಪಟ್ಟಿದ್ದಾನೆ, ಮೃತನು ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದ ಆನಂದಬಾಬು(40)ಎಂದು ತಿಳಿದು ಬಂದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸ್ ಠಾಣೆಯ ಎಎಸ್ ಐ ಶ್ರೀನಿವಾಸ ಮೂರ್ತಿ, ಸಿಬ್ಬಂದಿ ಸಾರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೆದುಳು ನಿಷ್ಕ್ರಿಯಗೊಂಡು ಸಾವು: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ವ್ಯಕ್ತಿ