ಮೈಸೂರು: ಎರಡು ಪಲ್ಸರ್ ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಬಲ್ಲಾಳ್ ವೃತ್ತದ ಶ್ರೀರಾಮ ಮಂದಿರದ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಮೈಸೂರು ನಗರದ ಬಲ್ಲಾಳ್ ವೃತ್ತದ ಸಮೀಪವಿರುವ ಶ್ರೀರಾಮ ಮಂದಿರ ಬಳಿ ತಡರಾತ್ರಿ ಈ ಘಟನೆ ಸಂಭವಿಸಿದೆ. ದರ್ಶನ್ ಕುಮಾರ್ (27) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರ. ದರ್ಶನ್ ಕುಮಾರ್ ಗಂಗೋತ್ರಿ ಬಡವಾಣೆಯ ನಿವಾಸಿಯಾಗಿದ್ದು, ಕಾರ್ಪೊರೇಷನ್ ನಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ಗಾಯಾಳು ಶಿವಕುಮಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಬೈಕ್ ಅಪಘಾತಕ್ಕೆ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿ ಗುಂಡಿ ಬಿದ್ದಿರುವುದೇ ಕಾರಣ ಎಂದು ಹೇಳಲಾಗುತ್ತಿದೆ. ಗುಂಡಿಗಳಿಂದಲೇ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಸವಾರರು ಗುಂಡಿಗಳನ್ನು ತಪ್ಪಿಸಲು ಹೋಗಿ ಈ ರೀತಿಯ ಅಪಘಾತಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಹೀರಾತು- ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಈ ಘಟನೆ ಸಂಬಂಧ ಕೆ.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.