ಮೈಸೂರು: ಜಿಲ್ಲಾ ಕಾಂಗ್ರೆಸ್ ನಿಯೋಗ ಹಾಗೂ ವಕೀಲರ ತಂಡ ನಗರ ಪೊಲೀಸ್ ಕಮೀಷನರನ್ನು ಭೇಟಿ ಮಾಡಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪ್ರತ್ಯೇಕ ದೂರನ್ನು ದಾಖಲಿಸಿದ್ದಾರೆ.
ಇಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಹಾಗೂ ನಗರ ಘಟಕದ ಕಾಂಗ್ರೆಸ್ ಸದಸ್ಯರು ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ ಅವರನ್ನು ಭೇಟಿ ಮಾಡಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಜಾಮೀನು ರಹಿತ ಪ್ರಕರಣ ದಾಖಲಾಗಿದ್ದರು ಅವರನ್ನು ಬಂಧಿಸಿಲ್ಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಹೀಗಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎರಡು ಪ್ರತ್ಯೇಕ ದೂರನ್ನು ದಾಖಲಿಸಿದ್ದಾರೆ.
ಇದನ್ನೂ ಓದಿ.. ನಾಳೆ ಬೆಳಗಾವಿಗೆ ಸಿಎಂ: ಮಂಗಳಾ ಸುರೇಶ್ ಅಂಗಡಿ ನಾಮಪತ್ರ ಸಲ್ಲಿಕೆ ವೇಳೆ ಬಿಎಸ್ವೈ ಸಾಥ್