ಮೈಸೂರು : ಸರಳ ದಸರಾ ಮಹೋತ್ಸವದಲ್ಲಿ ಭಾಗವಹಿಸುವ 5 ಆನೆಗಳ ತಾತ್ಕಾಲಿಕ ಪಟ್ಟಿಯನ್ನು ಸಿದ್ಧಪಡಿಸಿ ಮುಖ್ಯ ಅರಣ್ಯಾಧಿಕಾರಿಗಳಿಗೆ ರವಾನೆ ಮಾಡಲಾಗಿದೆ.
ಈ ಬಾರಿ ಸರಳ ಮತ್ತು ಸಾಂಪ್ರದಾಯಿಕ ದಸರಾ ಮಹೋತ್ಸವ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಸರಾದಲ್ಲಿ ಭಾಗವಹಿಸಲಿರುವ ಅಭಿಮನ್ಯು,ವಿಕ್ರಮ, ಗೋಪಿ, ಕಾವೇರಿ ಹಾಗೂ ವಿಜಯ ಆನೆಗಳ ಹೆಸರನ್ನು ಬೆಂಗಳೂರಿನ ಮುಖ್ಯ ಅರಣ್ಯಾಧಿಕಾರಿಗಳಿಗೆ ಆನೆಗಳ ತಾತ್ಕಾಲಿಕ ಪಟ್ಟಿ ಕಳುಹಿಸಲಾಗಿದೆ.
ಅರ್ಜುನ ಆನೆಯನ್ನು ಸಹ ಪರಿಗಣಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ದೂರವಾಣಿಯಲ್ಲಿ ಪ್ರಕ್ರಿಯೆ ನೀಡಿದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಎಂ ಸಿ ಅಲೆಕ್ಸಾಂಡರ್, ಸರಳ ದಸರಾದಲ್ಲಿ ಭಾಗವಹಿಸುವ ಆನೆಗಳ ತಾತ್ಕಾಲಿಕ ಪಟ್ಟಿಯನ್ನು ಬೆಂಗಳೂರಿನ ಮುಖ್ಯ ಅರಣ್ಯ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದರು.
ನಾಳೆ ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾ ದಸರಾ ಸಮಿತಿ ಸಭೆಯಲ್ಲಿ ಸರಳ ದಸರಾದ ರೂಪುರೇಷೆಗಳು ಸಿದ್ಧವಾಗಲಿವೆ ಎನ್ನಲಾಗಿದೆ.