ಮೈಸೂರು: ಬೈಕ್ ಕದಿಯಲೆಂದೇ ನಗರದಲ್ಲಿ ಮನೆ ಮಾಡಿದ್ದ ಕಳ್ಳನನ್ನು ಬಂಧಿಸಿ, ಆತನಿಂದ 4.81 ಲಕ್ಷ ರೂಪಾಯಿ ಮೌಲ್ಯದ 20 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಹೊಸೂರು ಗ್ರಾಮದ ವೆಂಕಟಚಾರಿ ಪುತ್ರ ಶ್ರೀನಿವಾಸ(50) ಬಂಧಿತ ಕಳ್ಳ. ಬೈಕ್‌ಗಳನ್ನು ಕದ್ದು ಹಣ ಸಂಪಾದನೆ ಮಾಡಬೇಕು ಎಂಬ ಉದ್ದೇಶದಿಂದ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಮನೆ ಮಾಡಿಕೊಂಡಿದ್ದ. ಜನರು ಮುಂಜಾನೆ ವಾಯುವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದ.
ಸರಸ್ವತಿಪುರಂ ಠಾಣೆ ಇನ್‌ಸ್ಪೆಕ್ಟರ್ ಧನರಾಜ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ನಕಲಿ ಕೀ ಬಳಸಿ ಬೈಕ್ ಕದಿಯಲು ಮುಂದಾಗಿದ್ದಾನೆ. ಈ ವೇಳೆ ಅನುಮಾನ ಗೊಂಡ ಇನ್‌ಸ್ಪೆಕ್ಟರ್ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್‌ಗಳನ್ನು ಕದ್ದಿಯುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.