ETV Bharat / state

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಆಗಮಿಸಿದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ - ಈಟಿವಿ ಭಾರತ ಕನ್ನಡ ನ್ಯೂಸ್

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸಲು ಆಗಮಿಸಿದ ಅಭಿಮನ್ಯು ನೇತೃತ್ವದ ಗಜಪಡೆಗಳಿಗೆ ಮೈಸೂರು ಅರಮನೆಯಲ್ಲಿ ಪುಷ್ಪಾರ್ಷನೆ ಮಾಡಿ ಸ್ವಾಗತ ಕೋರಲಾಯಿತು.

a-traditional-welcome-to-the-elephant-at-mysore
ವಿಶ್ವ ವಿಖ್ಯಾತ ಮೈಸೂರು ದಸರಾಗೆ ಆಗಮಿಸಿದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ
author img

By

Published : Aug 10, 2022, 1:45 PM IST

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸಲು ಆಗಮಿಸಿದ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಅರಮನೆಗೆ ಬರಮಾಡಿಕೊಳ್ಳಲಾಯಿತು.

ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದ ಗಜಪಡೆಯನ್ನು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬೆಳಗ್ಗೆ ಶುಭ ಕನ್ಯಾ ಲಗ್ನದಲ್ಲಿ ಪೂಜೆ ಸಲ್ಲಿಸಿ, ಪೂರ್ಣ ಕುಂಭ ಸ್ವಾಗತದೊಂದಿಗೆ ಪುಷ್ಪಾರ್ಚನೆ ಮಾಡಿ ಸ್ವಾಗತಕೋರಲಾಯಿತು. ಗಜಪಡೆಯಲ್ಲಿ ಅಂಬಾರಿ ಹೊರಲಿರುವ ಅಭಿಮನ್ಯು, ಅರ್ಜುನ, ಗೋಪಾಲಸ್ವಾಮಿ, ಧನಂಜಯ, ಭೀಮ, ಮಹೇಂದ್ರ, ಕಾವೇರಿ, ಚೈತ್ರ, ಲಕ್ಷ್ಮೀ ಆನೆಗಳಿದ್ದವು.

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಆಗಮಿಸಿದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

ಇದಕ್ಕೂ ಮೊದಲು ಮಂಗಳವಾದ್ಯ ಕಲಾ ತಂಡಗಳು, ಪೂಜಾ ಕುಣಿತ, ನಗಾರಿ, ಡೊಳ್ಳು ಕುಣಿತ ತಂಡಗಳು ಭಾಗವಹಿಸಿದ್ದವು. ಆನೆ ಬಾಗಿಲಿನಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳ ಮಾವುತ ಮತ್ತು ಕಾವಾಡಿಗರಿಗೆ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮೂಲಭೂತ ಸಾಮಗ್ರಿಗಳನ್ನು ವಿತರಿಸಿದರು. ಬಳಿಕ ಈ ಬಾರಿ ದಸರಾವನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಶುಭ ಕೋರಿ ಸಚಿವರು ಫಲ ತಾಂಬೂಲ ವಿತರಿಸಿದರು.

ಓದಿ : ಹಿಂದೂ-ಮುಸ್ಲಿಂ ಸಾಮರಸ್ಯದ ಮೊಹರಂ: ನೀರಲ್ಲೇ ಉರಿಯುತ್ತೆ ಈ ದರ್ಗಾದ ದೀಪ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.