ಮೈಸೂರು: ಪತಿಯ ಅಕ್ರಮ ಸಂಬಂಧದ ವಿಷಯ ತಿಳಿದ ಪತ್ನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸರಸ್ವತಿಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆನಂದನಗರ ನಿವಾಸಿ ಭಾವನಾ (24) ಮೃತ ಮಹಿಳೆ. ಭಾವನಾ ಒಂದು ತಿಂಗಳ ಹಿಂದೆ ಸಾಫ್ಟ್ವೇರ್ ಇಂಜಿನಿಯರ್ ಅಜಯ್ ಎಂಬಾತನನ್ನ ವಿವಾಹವಾಗಿದ್ದರು. ಪತಿ ಅಜಯ್ ಮತ್ತೊಂದು ಯುವತಿಯ ಜೊತೆ ಅಶ್ಲೀಲವಾಗಿ ಇದ್ದಂತಹ ಫೋಟೋ ನೋಡಿ ಭಾವನಾ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
![woman committed suicide, woman committed suicide in Mysore, Mysore crime news, ಮಹಿಳೆ ಆತ್ಮಹತ್ಯೆ, ಮೈಸೂರಿನಲ್ಲಿ ಮಹಿಳೆ ಆತ್ಮಹತ್ಯೆ, ಮೈಸೂರು ಅಪರಾಧ ಸುದ್ದಿ,](https://etvbharatimages.akamaized.net/etvbharat/prod-images/7485769_396_7485769_1591342732135.png)
ಪತಿ ಅಕ್ರಮ ಸಂಬಂಧದ ವಿಷಯ ಅರಿತ ಭಾವನಾ ಮೊಬೈಲ್ನಲ್ಲೇ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖ ಮಾಡಿ ನೇಣಿಗೆ ಶರಣಾಗಿದ್ದಾರೆ. ಅಜಯ್ ತಂದೆ ರಾಮಪ್ರಸಾದ್ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾವಿಗೆ ನ್ಯಾಯ ಸಿಗಲಿದೆಯಾ ಎಂಬುವುದನ್ನು ಕಾದು ನೋಡಬೇಕಾಗಿದೆ.
ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.