ಮೈಸೂರು: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ನಡೆದಿದೆ.
![accident between 2 bikes; 2 died](https://etvbharatimages.akamaized.net/etvbharat/prod-images/8855182_accident.jpg)
ಇಲವಾಲ ಗ್ರಾಮದ ರಾಮಚಂದ್ರ( 22), ನವೀನ್ (24) ವಾಹನ ಅಪಘಾತದಿಂದ ಮೃತಪಟ್ಟವರು. ಕೊಮ್ಮೆಗೌಡ ಕೊಪ್ಪಲು ಗ್ರಾಮದ ಗಿರೀಶ್ ಹಾಗೂ ಕೃಷ್ಣಗೆ ಗಂಭೀರ ಗಾಯವಾಗಿದ್ದು, ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿದೆ. ಸದ್ಯ ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.