ETV Bharat / state

ಮೈಸೂರಿನಲ್ಲಿ ಬೈಕ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು - Mysore accident news

ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ಬಳಿ ಬೈಕ್​ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಮೂವರು ಸಾವಿಗೀಡಾಗಿದ್ದಾರೆ.

ಮೈಸೂರು
ಮೈಸೂರು
author img

By

Published : Aug 2, 2022, 10:07 PM IST

ಮೈಸೂರು: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ಬಳಿ ನಡೆದಿದೆ. ಚಿಕ್ಕಕಾಳೇಗೌಡನ ಪುರದ ನಿವಾಸಿಗಳಾದ ಸಣ್ಣಸ್ವಾಮಿ, ಪ್ರಭು, ಮಹೇಶ ಮೃತ ದುರ್ದೈವಿಗಳು. ಹುಣಸೂರು ಕಡೆಯಿಂದ ಎಚ್.ಡಿ.ಕೋಟೆ ಕಡೆಗೆ ಬೈಕ್​ನಲ್ಲಿ ಮೂವರು ಬರುತ್ತಿದ್ದರು ಎಂದು ತಿಳಿದುಬಂದಿದೆ.

ಬೈಕ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ

ಬೈಕ್​ನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: ಕಾಡಿನಿಂದ ಪಟ್ಟಣಕ್ಕೆ ಬಂದ ಚಿರತೆಗಳು: ಹೆಚ್​.ಡಿ.ಕೋಟೆ ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.