ಹೆಚ್ ಡಿ ಕೋಟೆ(ಮೈಸೂರು): ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಭೀಮನಹಳ್ಳಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಬೈಕ್ ಹಿಂದೆ ಕುಳಿತಿದ್ದವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತದೇಹಗಳನ್ನು ಹೆಚ್.ಡಿ. ಕೋಟೆ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.