ETV Bharat / state

Mysore Road Accident: ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿ; ಗ್ರಾಮಪಂಚಾಯಿತಿ ಸದಸ್ಯ ಸಾವು, ಮೂವರಿಗೆ ಗಂಭೀರ ಗಾಯ - Mysore Road Accident

ಮೈಸೂರು ಹುಣಸೂರು ಹೆದ್ದಾರಿ ಅಪಘಾತದ ಕುರಿತು ಬಿಳಿಕೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mysore Hunasur Highway Accident
ಮೈಸೂರು ಹುಣಸೂರು ಹೆದ್ದಾರಿ ಅಪಘಾತ
author img

By

Published : Jun 12, 2023, 4:08 PM IST

ಮೈಸೂರು : ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೈಸೂರು - ಹುಣಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರನ್ನು ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾ.ಪಂ. ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ ಸದಸ್ಯ ಲೇ. ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಎಂದು ಗುರತಿಸಲಾಗಿದೆ. ಕಾರಿನ ಒಳಗೆ ಇದ್ದ ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ತಕ್ಷಣ ಸ್ಥಳೀಯ ಗ್ರಾಮಸ್ಥರು ಧಾವಿಸಿ ರಕ್ಷಣೆ ಮಾಡಿದ್ದು, ಮೈಸೂರು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಘಟನೆ ವಿವರ : ಮೃತ ಭಾಸ್ಕರ್ ತಮ್ಮ ಕಾರಿನಲ್ಲಿ ಕುಟುಂಬ ಸಮೇತ ತಾಲೂಕಿನ ಮನುಗನಹಳ್ಳಿಯ ಮಾವನ ಮನೆಗೆ ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಹೆದ್ದಾರಿಯ ಬನ್ನಿಕುಪ್ಪೆ ಬಳಿ ಪಿರಿಯಾಪಟ್ಟಣ ಡಿಪೋಗೆ ಸೇರಿದ ಕೆಎಸ್​ಆರ್​ಟಿಸಿ ಬಸ್ ಎದುರುಗಡೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟರೆ, ಕುಟುಂಬದವರಿಗೆ ತೀವ್ರ ಗಾಯಗಳಾಗಿದ್ದು, ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳನ್ನು ಗ್ರಾಮಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹುಣಸೂರು ಬಸ್ ಡಿಪೋ ಮ್ಯಾನೇಜರ್ ಸುಬ್ರಮಣ್ಯ ಭೇಟಿ ನೀಡಿ ಪರಿಶೀಲಿಸಿದರು.

ಮತ್ತೊಂದೆಡೆ ಪ್ರಕರಣ ದಾಖಲಾಸಿಕೊಂಡಿರುವ ಬಿಳಿಕೆರೆ ಪೋಲಿಸ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪಘಾತದ ನಂತರ ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿದ್ದರಿಂದ ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪೊಲೀಸರು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ : ನಿನ್ನೆ (ಭಾನುವಾರ) ಮೈಸೂರು ಬೆಂಗಳೂರು ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕಾರು ಪಲ್ಟಿ ಹೊಡೆದ ಪರಿಣಾಮ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತಕ್ಕೆ ಚಾಲಕನ ಅತಿಯಾದ ವೇಗವೇ ಕಾರಣ ಎಂದು ತಿಳಿದು ಬಂದಿತ್ತು. ಬೆಂಗಳೂರಿಂದ ಅತಿ ವೇಗವಾಗಿ ಬಂದ ಟಾಟಾ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿತ್ತು.

ಇದನ್ನೂ ಓದಿ : ಬೆಂಗಳೂರು: ಭಯ ಹುಟ್ಟಿಸುವಂತೆ ಸ್ಕೂಟರ್ ಚಲಾಯಿಸಿದ ಯುವಕರು... ವಿಡಿಯೋ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.