ETV Bharat / state

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮಟಕೆರೆ ಸಮೀಪ ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Accident between two bikes
ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ
author img

By

Published : May 19, 2020, 8:23 PM IST

ಮೈಸೂರು: ಬೈಕ್​​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸವಾರನೊಬ್ಬ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮಟಕೆರೆ ಸಮೀಪದ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

ತಾಲೂಕಿನ ಹೆಚ್.ಮಟಕೆರೆ ಬಳಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಮಾದಾಪುರ ಗ್ರಾಮದ ನಂಜುಂಡ (25) ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕೆಲಸದ ನಿಮಿತ್ತ ಮಾದಾಪುರದಿಂದ ಹ್ಯಾಂಡ್ ಪೋಸ್ಟ್ ಕಡೆಗೆ ಬರುತ್ತಿದ್ದ ವೇಳೆ, ಹೆಚ್.ಮಟಕೆರೆ ಸಮೀಪ ಹ್ಯಾಂಡ್ ಪೋಸ್ಟ್​ನಿಂದ ಬರುತ್ತಿದ್ದ ಬೈಕ್​ಗೆ ಮತ್ತೊಂದು ಬೈಕ್​​ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಇನ್ನು ಮಯೂರ್ (28), ಉದಯ್ (28) ಹಾಗೂ ಮೀನಾಕ್ಷಿ (48) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.