ETV Bharat / state

ನಿಂತಿದ್ದ ಬೈಕ್​ಗೆ ಕಾರು ಡಿಕ್ಕಿ: ಸ್ಥಳದಲ್ಲೇ ತಂದೆ ಸಾವು, ಮಗನ ಸ್ಥಿತಿ ಗಂಭೀರ - ಮೈಸೂರು ಅಪಘಾತ

ಬೈಕ್ ನಿಲ್ಲಿಸಿ ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಗೆ, ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಆತನ ಮಗ‌ ಗಾಯಗೊಂಡಿರುವ ಘಟನೆ ಮೈಸೂರಿನ ಮುಂಜನಹಳ್ಳಿ ಬಳಿ ನಡೆದಿದೆ.

ನಿಂತಿದ್ದ ಬೈಕ್​ಗೆ ಕಾರು ಡಿಕ್ಕಿ
ನಿಂತಿದ್ದ ಬೈಕ್​ಗೆ ಕಾರು ಡಿಕ್ಕಿ
author img

By

Published : Jul 31, 2020, 1:32 PM IST

ಮೈಸೂರು: ಬೈಕ್ ನಿಲ್ಲಿಸಿಕೊಂಡು ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಗೆ, ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಆತನ ಮಗ‌ ಗಾಯಗೊಂಡಿರುವ ಘಟನೆ ಮುಂಜನಹಳ್ಳಿ ಬಳಿ ನಡೆದಿದೆ.

ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಡಿ.ಕೆ.ಕೊಪ್ಪಲು ಗ್ರಾಮದ ಮಹದೇವ (45) ಮೃತಪಟ್ಟ ವ್ಯಕ್ತಿಯಾಗಿದ್ದು, ಪುತ್ರ ಕಿರಣ್ (14) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಂದೆ ಮಗ ಇಬ್ಬರು ಶಾಲಾ ಪ್ರವೇಶಾತಿ ಹಾಗೂ ಪಠ್ಯ ಪುಸ್ತಕಗಳ ಕುರಿತು ವಿಚಾರಿಸಲು ಬೈಕ್​ನಲ್ಲಿ ಶಾಲೆಗೆ ತೆರಳುತ್ತಿದ್ದರು. ಈ ವೇಳೆ ಫೋನ್​ ಬಂದಿದ್ದರಿಂದ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದರು. ಈ ವೇಳೆ, ಹಾಸನದಿಂದ ಮೈಸೂರಿಗೆ ಅತಿ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ತಂದೆ ಮಹದೇವ ಅವರು ಸ್ಥಳದಲ್ಲೇ ಸಾವನ್ನಪ್ಪಿದಾರೆ. ಇನ್ನು ಮಗ ಕಿರಣ್ ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತ ಮಹದೇವ ಪತ್ನಿ ಭ್ಯಾಗಮ್ಮ ನೀಡಿದ ದೂರಿನನ್ವಯ ಸಾಲಿಗ್ರಾಮ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.