ETV Bharat / state

ಮೈಸೂರು: ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ಆರೋಪ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಮಾನತು - ಡಿಡಿಪಿಐ

Suspension of Headmaster: ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕನನ್ನು ಅಮಾನತು ಮಾಡಲಾಗಿದೆ.

Suspension of Headmaster
ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ: ಮುಖ್ಯಶಿಕ್ಷಕ ಅಮಾನತು
author img

By ETV Bharat Karnataka Team

Published : Dec 19, 2023, 7:24 AM IST

ಮೈಸೂರು: ''ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಎಚ್ ಡಿ ಕೋಟೆ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ನ.20ರಂದು ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಪ್ರೌಢಶಾಲೆಯಿಂದ 8, 9 ಮತ್ತು 10ನೇ ತರಗತಿಗಳ 50 ಮಕ್ಕಳು 5 ದಿನಗಳ ಪ್ರವಾಸಕ್ಕೆ ಹೋಗಿದ್ದರು. ಇದರಲ್ಲಿ 20 ಬಾಲಕರು ಮತ್ತು 30 ಬಾಲಕಿಯರು, ಮೂವರು ಪುರುಷ ಹಾಗೂ ಇಬ್ಬರು ಮಹಿಳಾ ಶಿಕ್ಷಕಿಯರು ಇದ್ದರು. ಆದರೆ, ಪ್ರವಾಸ ಮುಗಿಸಿ ಬಂದ ಮೇಲೆ ಪೋಷಕರ ಬಳಿ ಕೆಲ ವಿದ್ಯಾರ್ಥಿನಿಯರು ಬಸ್ ಹಾಗೂ ಬೀಚ್​ನಲ್ಲಿ ಮುಖ್ಯ ಶಿಕ್ಷಕ ಹಾಗೂ ಡಿ ಗ್ರೂಪ್ ನೌಕರ ಅನುಚಿತವಾಗಿ ವರ್ತಿಸಿದ ಬಗ್ಗೆ ಮಾಹಿತಿ ನೀಡಿದ್ದರು.

ಈ ಸಂಬಂಧ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ಆಗಮಿಸಿ ಮುಖ್ಯ ಶಿಕ್ಷಕರ ವರ್ತನೆ ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಬಿಇಒ ಮಾರಯ್ಯ ಅವರು ಶಾಲೆಗೆ ಭೇಟಿ ನೀಡಿ, ಮಕ್ಕಳು ಹಾಗೂ ಶಿಕ್ಷಕರ ಅಭಿಪ್ರಾಯ ಪಡೆದು ಡಿಡಿಪಿಐ ಅವರಿಗೆ ವರದಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ ಡಿಡಿಪಿಐ ಎಚ್.ಕೆ. ಪಾಂಡು ಅವರು ಡಿ ಗ್ರೂಪ್ ನೌಕರನನ್ನು ಅಮಾನತುಗೊಳಿಸಿದ್ದರು. ಜೊತೆಗೆ ಮುಖ್ಯ ಶಿಕ್ಷಕನಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದರು. ಇದೀಗ ಡಿಡಿಪಿಐ ಅವರ ವರದಿ ಆಧರಿಸಿ ಶಾಲಾ ಶಿಕ್ಷಣ‌ ಇಲಾಖೆ ಆಯುಕ್ತರಾದ ಕಾವೇರಿ ಅವರು ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಪ್ರಕರಣ, ಅಸಭ್ಯ ವರ್ತನೆ ಆರೋಪದ ಹಿನ್ನೆಲೆ ಶಿಕ್ಷಕ ಅಮಾನತು: ಶಾಲಾ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಹಿನ್ನೆಲೆ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಗ್ರಾಮಸ್ಥರು ಹಲ್ಲೆ ನಡೆಸಲು ಮುಂದಾಗಿದ್ದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಶಾಲೆಯೊಂದರಲ್ಲಿ ಇತ್ತೀಚೆಗೆ ಜರುಗಿತ್ತು. ಶಿಕ್ಷಕನ ವರ್ತನೆಯ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಶಾಲೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ವಿಷಯ ಅರಿತುಕೊಂಡು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದ ಮಧುಗಿರಿ ಬಿಇಒ ತಿಮ್ಮರಾಜು ಅವರು ಶಿಕ್ಷಕ ಮಂಜುನಾಥ್​ ಅವರನ್ನು ಅಮಾನತುಗೊಳಿಸಿದ್ದರು.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಲೆಯ ಸಹ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ಥಳಿಸಿದ್ದರು. ಪ್ರತಿನಿತ್ಯ ಮೈ ಮುಟ್ಟಿ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ವಿದ್ಯಾರ್ಥಿನಿಯರು ಪೋಷಕರಿಗೆ ತಿಳಿಸಿದ್ದರು. ಆಗ ಶಿಕ್ಷಕರನ್ನು ಪೋಷಕರು ಈ ಕುರಿತು ವಿಚಾರಿಸಿದ್ದರು. ನಂತರ ಆತನಿಗೆ ಥಳಿಸಿ, ಶಾಲೆಯ ಮುಂಭಾಗ ಪ್ರತಿಭಟಿಸಿ, ಆರೋಪಿ ಶಿಕ್ಷಕಕನ್ನು ಪೊಲೀಸರಿಗೆ ಒಪ್ಪಿಸಿದ್ದರು. ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು, ಬಡವನಹಳ್ಳಿ ಪೊಲೀಸ್‌ ಇನ್‌ಸ್ಪೆಕ್ಟರ್ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಭೇಟಿ ನೀಡಿ ಪರಿಶೀಲಿಸಿದ್ದರು. ಈ ಕುರಿತು ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಶಾಲಾ - ಕಾಲೇಜು ಸಮಯ ಬದಲಾವಣೆ ಮಾಡಲಾಗದು: ಹೈಕೋರ್ಟ್‌ಗೆ ಸರ್ಕಾರದ ವರದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.