ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಕೀಚಕನಿಗೆ 20 ವರ್ಷ ಜೈಲು ಶಿಕ್ಷೆ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ನ್ಯಾಯಾಲಯವು 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ಆರೋಪಿಯು ತನ್ನ ಸಂಬಂಧಿಯ ಮಗಳನ್ನು ಬಟ್ಟೆ ಕೊಡಿಸಿ ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದ.

accused-sentenced-to-20-years-in-minor-rape-case
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಕೀಚಕನಿಗೆ 20 ವರ್ಷ ಜೈಲು ಶಿಕ್ಷೆ
author img

By

Published : Oct 20, 2022, 8:03 AM IST

ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಪಾಂಡವಪುರದ ತಾಲೂಕಿನ ಅಂತನಹಳ್ಳಿ ಗ್ರಾಮದ ಪ್ರಸನ್ನ ಎಂಬಾತ ಶಿಕ್ಷೆಗೆ ಒಳಗಾದ ವ್ಯಕ್ತಿ.

ಈತ ತನ್ನ ಸಂಬಂಧಿಯ ಮಗಳನ್ನು ಬಟ್ಟೆ ಕೊಡಿಸಿ ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಇದರಿಂದ ಗರ್ಭಿಣಿಯಾಗಿದ್ದ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ಅಪ್ರಾಪ್ತೆಯ ತಾಯಿ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ತನಿಖೆ ನಡೆಸಿದ ಸಾಲಿಗ್ರಾಮ ಠಾಣೆ ಪೊಲೀಸರು, ಆರೋಪಿ ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶಾಮ ಕಮರೋಜ್ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷ ಶಿಕ್ಷೆಯೊಂದಿಗೆ 61 ಸಾವಿರ ರೂ. ದಂಡ ವಿಧಿಸಿದ್ದಾರೆ. ಜೊತೆಗೆ ಸಂತ್ರಸ್ತ ಅಪ್ರಾಪ್ತೆಯು 5 ಲಕ್ಷ ರೂ. ಪರಿಹಾರಕ್ಕೆ ಅರ್ಹ ಎಂದು ತೀರ್ಪು ನೀಡಿದ್ದಾರೆ.

ಸರ್ಕಾರಿ ವಿಶೇಷ ಅಭಿಯೋಜಕರಾದ ಕೆ.ಬಿ.ಜಯಂತಿ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.

ಇದನ್ನೂ ಓದಿ: ಮಕ್ಕಳ ಪೋಷಣೆಗೆ ಮೆಕ್ಸಿಕೋ ಪತ್ನಿ - ಭಾರತದ ಪತಿ ನಡುವೆ ಸಂಧಾನ ಮಾಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.