ಮೈಸೂರು: ತಿ.ನರಸೀಪುರ ತಾಲೂಕಿನ ನದಿ ಅಂಚಿನ ಗ್ರಾಮದಲ್ಲಿ ಮಳೆ ಬಂದಾಗ ಸಾಕಷ್ಟು ಸಮಸ್ಯೆ ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಜನರನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು.
ತಾಲ್ಲೂಕಿನ ಮಾಲಂಗಿ ಗ್ರಾಮದಲ್ಲಿ ನೆರೆ ಸಂತ್ರಸ್ತರಿಗೆ ಆಹಾರ ಧಾನ್ಯ ಹಾಗೂ ಬಟ್ಟೆಗಳನ್ನು ವಿತರಿಸಿ ಅವರು ಮಾತನಾಡಿದರು.
ನದಿ ಅಂಚಿನಲ್ಲಿರುವ ಮುಳುಗಡೆ ಪ್ರದೇಶದಲ್ಲಿ ವಾಸಿಸುವ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲು ಕ್ರಮವಹಿಸಲಾಗುತ್ತದೆ. ಪ್ರತಿ ಬಾರಿ ಪ್ರವಾಹ ಬಂದಾಗ ನದಿ ಅಂಚಿನ ಗ್ರಾಮಗಳು ನೆರೆ ಹಾವಳಿಗೆ ತುತ್ತಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತವೆ. ಇದಕ್ಕೆ ಶಾಶ್ವತ ಪರಿಹಾರವೆಂದರೆ ಮುಳುಗಡೆ ಪ್ರದೇಶದಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವುದು. ಆದ್ದರಿಂದ ನೀವೆಲ್ಲಾ ಸಹಕಾರ ನೀಡಬೇಕು ಎಂದರು.