ಮೈಸೂರು: ನಟ ದರ್ಶನ್ ಹೆಸರಲ್ಲಿ ವಂಚನೆಗೆ ಯತ್ನಿಸಿದ ಆರೋಪಿ ಅರುಣಾ ಕುಮಾರಿಯನ್ನು ವಶಕ್ಕೆ ಪಡೆದಿರುವ ಹೆಬ್ಬಾಳ ಪೊಲೀಸರು, ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಇಂದೇ ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆಯಿದೆ. ಆರೋಪಿ ಜತೆಯಲ್ಲಿದ್ದ ಮತ್ತಿಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇದನ್ನೂ ಓದಿ : ದರ್ಶನ್ ಅವರನ್ನು ನಾವು ಠಾಣೆಗೆ ಕರೆದಿಲ್ಲ: ಡಿಸಿಪಿ ಪ್ರದೀಪ್ ಗುಂಟಿ
ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ದೂರುದಾರ ಹರ್ಷ ಮೆಲಾಂಟ ಹೋಟೆಲ್ಗೆ ಭೇಟಿ ನೀಡಿದ ಸಂಬಂಧ ಸಿಸಿಟಿವಿ ದಾಖಲೆ ಪರಿಶೀಲಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ:ದರ್ಶನ್ ಹೆಸರಲ್ಲಿ ವಂಚನೆ ಪ್ರಕರಣ: 'ರೆಕ್ಕೆ ಕಟ್ ಮಾಡಲ್ಲ, ತಲೆನೇ ಕಟ್ ಮಾಡೋನು ನಾನು'
ಏನಿದು ಘಟನೆ?: ಮೈಸೂರಿನ ನಿಮ್ಮ ಕೆಲ ಸ್ನೇಹಿತರು ನಿಮ್ಮ ಶ್ಯೂರಿಟಿಯಲ್ಲಿ 25 ಕೋಟಿ ರೂ.ಗೆ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ಇದರ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದೇನೆ ಎಂದು ನಿರ್ಮಾಪಕ ಉಮಾಪತಿ ಹಾಗೂ ಶ್ರೀನಿವಾಸ ಗೌಡ ಜೊತೆ ದರ್ಶನ್ ಬಳಿ ಲೋನ್ ವಿಚಾರವಾಗಿ ಮಾತನಾಡಲು ತೆರಳಿದ್ದ ಮಹಿಳೆಯೊಬ್ಬರು, ತಾನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದಳು. ನಂತರ ವಿಷಯ ತಿಳಿದ ದರ್ಶನ್ ಸ್ನೇಹಿತರು, ಲೋನ್‌ಗೆ ಯಾರೂ ಅರ್ಜಿ ಹಾಕಿಲ್ಲ ಎಂದು ಮೈಸೂರಿನ ಹೆಬ್ಬಾಳ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಮಹಿಳಾ ಬ್ಯಾಂಕ್ ಮ್ಯಾನೇಜರ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ನಟ ದರ್ಶನ್ ಹೆಸರಲ್ಲಿ ವಂಚನೆ: ನಿರ್ಮಾಪಕ ಉಮಾಪತಿ ಹೇಳಿದ್ದೇನು?