ಮೈಸೂರು: ಸೆಪ್ಟೆಂಬರ್ 16 ರಿಂದ 9 ದಿನಗಳವರೆಗೆ ನಡೆಯುವ ಯುವ ಸಂಭ್ರಮ ಕಾರ್ಯಕ್ರಮವನ್ನು ಖ್ಯಾತ ಕನ್ನಡ ಚಲನಚಿತ್ರ ನಟ ಡಾಲಿ ಧನಂಜಯ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಯುವ ದಸರಾ ಉಪ ಸಮಿತಿಯ ವಿಶೇಷಾಧಿಕಾರಿಯಾಗಿರುವ ಎಸ್ಪಿ ಆರ್. ಚೇತನ್ ಅವರು ಮಾಹಿತಿ ನೀಡಿದ್ದಾರೆ.
ಸೆ. 16ರಿಂದ 9 ದಿನಗಳ ಕಾಲ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಯುವ ಸಂಭ್ರಮ ಕಾರ್ಯಕ್ರಮದಲ್ಲಿ 250 ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮ ನೀಡಲಿದ್ದಾರೆ. ಅದರಲ್ಲೂ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಸಂಬಂಧಿಸಿದಂತೆ ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ಸೇರಿದಂತೆ ಒಂಬತ್ತು ವಿಷಯಗಳ ಕುರಿತು ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಲಿದ್ದಾರೆ.
ಇವುಗಳಲ್ಲಿ ಉತ್ತಮ ಪ್ರದರ್ಶನ ತೋರಿದ 18 ತಂಡಗಳನ್ನು ಯುವ ದಸರಾ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗುವುದು ಮತ್ತು ಆಯ್ಕೆಯಾಗುವ 18 ತಂಡಗಳಿಗೆ ಮುಂಬರುವ ಯುವ ದಸರಾ ಕಾರ್ಯಕ್ರಮದ ಆರಂಭದಲ್ಲಿ ಆಯ್ಕೆಯಾದ ತಂಡಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಯುವ ದಸರಾ ಉಪ ಸಮಿತಿಯ ವಿಶೇಷಾಧಿಕಾರಿಯಾಗಿರುವ ಎಸ್ಪಿ ಆರ್ ಚೇತನ್ ಅವರು ತಿಳಿಸಿದ್ದಾರೆ.
ಓದಿ: ಮೈಸೂರಿನಲ್ಲಿ ಅದ್ಧೂರಿ ದಸರಾ : ಸರ್ಕಾರದಿಂದ ನೆರವಿನ ನಿರೀಕ್ಷೆಯಲ್ಲಿ ಟಾಂಗಾವಾಲಾಗಳು