ಮೈಸೂರು : ಎಲ್ಲ ಕ್ಷೇತ್ರಗಳಿಗೂ 50:50 ರೂಲ್ಸ್‌ನಿಂದ ರಿಲ್ಯಾಕ್ಸ್ ಕೊಡಲಾಗಿದೆ. ಆದರೆ, ಸಿನಿಮಾ ಮಂದಿರಗಳಿಗೆ ಯಾಕೆ? ರಿಲ್ಯಾಕ್ಸ್ ಕೊಟ್ಟಿಲ್ಲ ಎಂದು ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಸಿನಿಮಾ ಮಂದಿರಗಳಿಗೆ ಕೋವಿಡ್ 50:50 ರೂಲ್ಸ್ ಹಿನ್ನೆಲೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವರಾಜ್‌ಕುಮಾರ್, ನಿನ್ನೆ (ಶನಿವಾರ) ಕೂಡ ನಾನು ಈ ಬಗ್ಗೆ ಮಾಹಿತಿ ತೆಗೆದುಕೊಂಡಿದ್ದೇನೆ. ನಾವು ಕೊರೊನಾದ ಜೊತೆ ಜೊತೆಗೆ ಬದುಕಬೇಕಿದೆ. ಅದರ ಜತೆಗೆ ಬದುಕಬೇಕಾದ ಅನಿವಾರ್ಯತೆ ಇದೆ ಎಂದರು.
ಮುಖ್ಯಮಂತ್ರಿಗಳು ನಮಗೆ ಸಾಕಷ್ಟು ಬಾರಿ ಅನುಕೂಲ ಮಾಡಿಕೊಟ್ಟಿದ್ದಾರೆ. ಈಗಲೂ ನಮಗೆ ಅನುಕೂಲ ಮಾಡಿಕೊಡುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಅಪ್ಪು ಸಮಾಧಿ ಬಳಿ ಕೆಎಸ್ಆರ್ಎಲ್ಪಿಎಸ್ 'ದೀಪ ನಮನ'