ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನದಲ್ಲಿ ದೇಶದ ಹೆಮ್ಮೆಯ ಧ್ವಜ ಹಿಡಿದಿರುವುದಕ್ಕೆ ಮತ್ತು ಇಂತಹ ಕಾರ್ಯಕ್ರಮವನ್ನು ನಮ್ಮೂರಿನಲ್ಲಿ ಆಯೋಜಿಸಿರುವುದಕ್ಕೆ ಸಂತಸವಾಗಿದೆ ಎಂದು ಕನ್ನಡ ಚಲನಚಿತ್ರ ನಟ ಯಶ್ ಹೇಳಿದರು.
ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮಾಡುತ್ತಿದ್ದೇವೆ. ಆ ಸಂದರ್ಭದಲ್ಲಿ ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಸದುಪಯೋಗ ಮಾಡಿಕೊಳ್ಳಬೇಕು. ವಿದ್ಯಾರ್ಥಿಯಾಗಿದ್ದಾಗ ನಾನು ತಂದೆ-ತಾಯಿಯನ್ನು ಖುಷಿಪಡಿಸುವ ಕೆಲಸ ಮಾಡಲಿಲ್ಲ. ಬದಲಾಗಿ ಮೈಸೂರಿನ ಕಾಳಿದಾಸ ರಸ್ತೆ, ಒಂಟಿಕೊಪ್ಪಲ್, ಪಡುವಾರಹಳ್ಳಿ, ಮಾನಸ ಗಂಗೋತ್ರಿಯಲ್ಲಿ ಓಡಾಡಿಕೊಂಡಿದ್ದೆ.
ಆದರೆ, ಜೀವನದಲ್ಲಿ ಆದ ಸಣ್ಣ ಬದಲಾವಣೆ ಮುಂದಿನ ದಿನಗಳಲ್ಲಿ ಸಾಕಷ್ಟು ಬದಲಾವಣೆ ತಂದಿತು. ನಾನೇನು ಹೆಚ್ಚು ಬದಲಾಗಿಲ್ಲ, ಮೊದಲು ಹೇಗಿದ್ದೆನೋ ಈಗಲೂ ಅದೇ ರೀತಿ ಇದ್ದೇನೆ. ಪ್ರತಿಯೊಬ್ಬರೂ ಜೀವನದಲ್ಲಿ ತಮಾಷೆ ಮಾಡ್ತಾ ಇರಿ, ಮಜಾ ಮಾಡ್ಕೊಂಡಿರಿ, ನಗು ನಗುತಾ ಇರಿ, ಸಂತಸದ ಯಾವುದೇ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದರು.
ಇದನ್ನೂ ಓದಿ: ಜಂಬೂ ಸವಾರಿ ಆನೆಗಳ ತೂಕ ಪರೀಕ್ಷೆ: ಮಾಜಿ ಕ್ಯಾಪ್ಟನ್ ಅರ್ಜುನನೇ ಬಲಶಾಲಿ