ಮೈಸೂರು : ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಮೈಸೂರು ಜಿಲ್ಲಾಡಳಿತದಿಂದ ಯಾವುದೇ ಪಟ್ಟಿ ಕಳುಹಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಡಾ. ಗೌತಮ್ ಬಗಾದಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಆನೆಗಳಿಗೆ ಅರಮನೆ ಆವರಣ ಬಿಟ್ಟು ಜಂಬೂಸವಾರಿ ಮಾರ್ಗದಲ್ಲಿ ತಾಲೀಮು ವಿಚಾರವಾಗಿ ಹೈಪವರ್ ಕಮಿಟಿಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು. ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ಬಳಿಕ ಹೈಪವರ್ ಕಮಿಟಿಯಲ್ಲಿ ನಿರ್ಧಾರ ಮಾಡಲಾಗುವುದು ಎಂದರು.
ಮಹಿಷಾ ದಸರಾ ಆಚರಣೆ ಸಂಬಂಧಿಸಿದಂತೆ ಕಾನೂನು ಚೌಕಟ್ಟಿನೊಳಗೆ ಏನು ಮಾಡಬಹುದು ಎಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ಬಿಜೆಪಿ ಮತ್ತು ಮಹಿಷಾ ದಸರಾ ಆಚರಣಾ ಸಮಿತಿಯ ಎರಡೂ ಕಡೆಯವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಬಿಎಸ್‌ಎಫ್ ಕ್ಯಾಂಪ್ನ 51 ಯೋಧರಲ್ಲಿ ಕೋವಿಡ್ ಸೋಂಕು ದೃಢ