ETV Bharat / state

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೈಸೂರಿನಲ್ಲಿ ಬ್ಯಾಂಕ್​ ನೌಕರರಿಂದ ಬಂದ್​ - bandh in mysore

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರು ನಗರದ ಸ್ಟೇಟ್ ಬ್ಯಾಂಕ್ ಮುಖ್ಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

all-india-bank-employees-protest-at-mysuru
all-india-bank-employees-protest-at-mysuruall-india-bank-employees-protest-at-mysuru
author img

By

Published : Jan 31, 2020, 6:49 PM IST

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರು ನಗರದ ಸ್ಟೇಟ್ ಬ್ಯಾಂಕ್ ಮುಖ್ಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ದೇಶಾದ್ಯಂತ ಬ್ಯಾಂಕ್ ಸೇವೆ ಬಂದ್

ದೇಶಾದ್ಯಂತ ಬ್ಯಾಂಕ್ ಸೇವೆ ಬಂದ್ ಹಿನ್ನೆಲೆಯಲ್ಲಿ ಇಂದು ನಗರದ ಪ್ರಮುಖ ರಸ್ತೆಗಳಲ್ಲಿ ಬಹುತೇಕ ಎಲ್ಲ ರಾಷ್ಟ್ರೀಕೃತ ಬ್ಯಾಂಕ್​ಗಳ ಅಧಿಕಾರಿ, ಸಿಬ್ಬಂದಿ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್​ಗಳ ನೌಕರರ ಒಕ್ಕೂಟ 2 ದಿನಗಳ ಮುಷ್ಕರಕ್ಕೆ ಕರೆ ಕೊಟ್ಟಿರುವುದರಿಂದ ಇಂದಿನಿಂದ ಮೂರು ದಿನಗಳ ಕಾಲ ಬ್ಯಂಕ್​ಗಳು ಮುಚ್ಚಿರಲಿವೆ.

ನೌಕರರ ಪಿಂಚಣಿ ಪರಿಷ್ಕರಣೆ, ಶೇ.20 ವೇತನ ಹೆಚ್ಚಳ, ವಾರದಲ್ಲಿ 5 ದಿನ ಮಾತ್ರ ಕರ್ತವ್ಯ ನಿರ್ವಹಣೆ, ನೂತನ ಪಿಂಚಣಿ ಯೋಜನೆ ರದ್ದು, ಮೂಲ ವೇತನದೊಂದಿಗೆ ವಿಶೇಷ ಭತ್ಯೆ ಸೇರಿಸುವುದು ಸೇರಿ 12 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರಕ್ಕೆ ಕರೆ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.