ETV Bharat / state

ಮೈಸೂರಿನಲ್ಲಿ ಆಗಸ್ಟ್ 1ರಿಂದ 4ರ ವರೆಗೆ ಸೇನಾ ರ‍್ಯಾಲಿಗೆ ಸಕಲ ಸಿದ್ದತೆ; ಜಿಲ್ಲಾಧಿಕಾರಿ

ಸೈನಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ 1,723 ಅಭ್ಯರ್ಥಿಗಳು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ

All ready for army rally in Mysore from 1st to 4th August

author img

By

Published : Jul 25, 2023, 5:48 PM IST

ಮೈಸೂರು:‌ ಆಗಸ್ಟ್ 1 ರಿಂದ ಆಗಸ್ಟ್ 4 ರವರೆಗೆ ನಡೆಯಲಿರುವ ಸೇನಾ ರ‍್ಯಾಲಿಗೆ ಆಗಮಿಸುವ ಎಲ್ಲ ಅಭ್ಯರ್ಥಿಗಳಿಗೆ ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಸೂಚಿಸಿದರು.

ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು , ಸೈನಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ 1,723 ಅಭ್ಯರ್ಥಿಗಳು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲಾ ಅಭ್ಯರ್ಥಿಗಳಿಗೂ ನಂಜರಾಜ್ ಬಹದ್ದೂರ್ ಛತ್ರದಲ್ಲಿ ವಾಸ್ತವ್ಯ ವ್ಯವಸ್ಥೆ ಕಲ್ಪಿಸಲು, ಕ್ರೀಡಾಂಗಣದಲ್ಲಿ ನಾಲ್ಕು ಬಿಎಸ್ಎನ್ಎಲ್ ಇಂಟರ್ನೆಟ್ ವ್ಯವಸ್ಥೆ ಮತ್ತು ಒಂದು ಲ್ಯಾಂಡ್​​​​ಲೈನ್​ ವ್ಯವಸ್ಥೆ ಹಾಗೂ ಅಭ್ಯರ್ಥಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದರು.

ಶಿಕ್ಷಕರ ಭವನ ಮತ್ತು ರ‍್ಯಾಲಿ ನಡೆಯಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಅಭ್ಯರ್ಥಿಗಳನ್ನು ನಂಜರಾಜ ಬಹದ್ದೂರ್ ಛತ್ರದಿಂದ ಚಾಮುಂಡಿ ವಿಹಾರ ಕ್ರೀಡಾಂಗಣಕ್ಕೆ ಕರೆದುಕೊಂಡು ಹೋಗಲು ಮಿನಿ ಬಸ್ ವ್ಯವಸ್ಥೆ ಕೂಡಾ ಮಾಡಲು ಮತ್ತು ನಂಜುರಾಜ್ ಬಹದ್ದೂರ್ ಛತ್ರ ಶಿಕ್ಷಕರ ಭವನ ಮತ್ತು ಚಾಮುಂಡಿ ವಿಹಾರ ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶವನ್ನು ಶುಚಿಗೊಳಿಸುವ ಜವಾಬ್ದಾರಿಗಳನ್ನು ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ವಹಿಸಲಾಗಿದೆ ಎಂದು ಸೇನಾ ಭರ್ತಿ ರ‍್ಯಾಲಿ ಬಗ್ಗೆ ವಿವರಣೆಯನ್ನು ಡಿಸಿ ಒದಗಿಸಿದರು.

ಸೇನಾ ಭರ್ತಿ ನಡೆಯಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವೈದ್ಯಕೀಯ ಸೇವೆ, ಆಂಬ್ಯುಲೆನ್ಸ್ ವ್ಯವಸ್ಥೆ, ಅಗ್ನಿಶಾಮಕ ಸೇವೆ, ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಹಾಗೂ ಸೇನಾ ಭರ್ತಿ ರ‍್ಯಾಲಿಗೆ ಅಗತ್ಯವಿರುವ ಎಲ್ಲಾ ಪೂರಕ ಸೌಲಭ್ಯಗಳನ್ನು ಒದಗಿಸುವಂತೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಇದೇ ವೇಳೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಅಷ್ಟೇ ಅಲ್ಲ ಎಲ್ಲವೂ ಸುಲಲಿತವಾಗಿ ನಡೆಯಲು ಸಾಧ್ಯ ಇರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಕರ್ನಲ್ ಗೌರವ್ ತೊಪ್ಪಾ, ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಯೋಗಾನಂದ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ಮೇಜರ್ ಜೆ ಆರ್ ಬಾಲಸುಬ್ರಹ್ಮಣ್ಯಂ, ಡಿಪಿಇಒ ಎಸ್ ಸಿದ್ದರಾಜು, ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದರಾಜು, ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಎಂ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಂಸ್ಕೃತಿಕ ನಗರಿಯಲ್ಲಿ ಜಿಟಿಜಿಟಿ ಮಳೆ: ಜನಜೀವನ ಅಸ್ತವ್ಯಸ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.