ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ನಾಳೆ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತ ಪ್ರಕಾಶ್ ತಿಳಿಸಿದರು.
ನಿನ್ನೆ ನಡೆದ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮೈಸೂರು, ಹಾಸನ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯಿಂದ ಶೇ.69.90ರಷ್ಟು ಮತದಾನವಾಗಿತ್ತು. ಇಲ್ಲಿಯವರೆಗೆ ನಡೆದ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನ ನಡೆದ ಚುನಾವಣೆ ಇದಾಗಿದೆ.
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ: ಬೆಳಗ್ಗೆ 8 ಗಂಟೆಯಿಂದ ಪಡುವಾರಹಳ್ಳಿಯ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಮೂರು ಕೊಠಡಿಗಳಲ್ಲಿ 28 ಟೇಬಲ್‌ಗಳನ್ನು ಹಾಕಲಾಗಿದೆ. 19 ಅಭ್ಯರ್ಥಿಗಳು ಕಣದಲ್ಲಿದ್ದು, ಅಭ್ಯರ್ಥಿಗಳ ಪರವಾಗಿ ಮತ ಎಣಿಕೆಗೆ ಟೇಬಲ್ಗೊಬ್ಬರಂತೆ ಎಣಿಕಾ ಏಜೆಂಟ್‌ಗಳನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ. ಎಣಿಕಾ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ: 'ದೇಶ ಗಾಂಧಿ ಕುಟುಂಬದ ದಿಕ್ಕಿನಲ್ಲಿ ನಡೆಯೋಲ್ಲ, ಸಂವಿಧಾನದ ಪ್ರಕಾರ ನಡೆಯುತ್ತಿದೆ'