ETV Bharat / state

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ ಆರೋಪ

author img

By

Published : Aug 27, 2022, 10:33 AM IST

Updated : Aug 27, 2022, 6:51 PM IST

ಸ್ವಾಮೀಜಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪ. ವಿದ್ಯಾರ್ಥಿನಿಯರಿಗೆ ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಎಫ್​ಐಆರ್​ ದಾಖಲಾಗಿದೆ.

ಸ್ವಾಮೀಜಿಯಿಂದ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ

ಮೈಸೂರು: ರಾಜ್ಯದ ಪ್ರತಿಷ್ಠಿತ ಮಠವೊಂದರ ಹಾಸ್ಟೆಲ್​ನಲ್ಲಿದ್ದ ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಒಡನಾಡಿ ಮಹಿಳಾ ಮತ್ತು ಮಕ್ಕಳ ವಸತಿ ಕೇಂದ್ರದ ಸಿಬ್ಬಂದಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿನಿಯರ ಜೊತೆ ಸಮಾಲೋಚನೆ ನಡೆಸಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದ್ದಾರೆ.

ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಠ ನಡೆಸುತ್ತಿರುವ ಶಾಲೆಯಲ್ಲೇ ಈ ವಿದ್ಯಾರ್ಥಿನಿಯರು ಓದುತ್ತಿದ್ದಾರೆ ಮತ್ತು ಮಠದ ಉಚಿತ ಹಾಸ್ಟೆಲ್​ನಲ್ಲೇ ವಸತಿ ಪಡೆದಿದ್ದರು. ಈ ಸಂದರ್ಭದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ ಎಂದು ದೂರಲಾಗಿದೆ. ಇದೇ ವೇಳೆ, ಕಿರುಕುಳ ಪ್ರಶ್ನೆ ಮಾಡಿದ್ದಕ್ಕೆ ಹಾಸ್ಟೆಲ್​​ನಿಂದ ಹೊರ ಹಾಕಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಹಾಸ್ಟೆಲ್​ನಿಂದ ಹೊರ ಹಾಕಿದ ಬಳಿಕ ಮನೆಗೆ ಹೋಗದೆ ಬೆಂಗಳೂರಿನ ತಮ್ಮ ಸಂಬಂಧಿಕರ ಮನೆಗೆ ಹೋಗಲು ನಿರ್ಧರಿಸಿ ಬೆಂಗಳೂರಿಗೆ ಹೋದಾಗ ಅಲ್ಲಿ, ಆಟೋ ಚಾಲಕನಿಗೆ ಈ ಬಗ್ಗೆ ಮಾಹಿತಿ ನೀಡಿದೆವು. ಆಗ ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದಿದ್ದ. ಅಲ್ಲಿ ಪೊಲೀಸರು ನಮ್ಮನ್ನು ಪೋಷಕರ ಬಳಿ ಕಳುಹಿಸಿಕೊಟ್ಟರು. ಬಳಿಕ ಮಾಹಿತಿ ಅರಿತ ಪೋಷಕರು ಸ್ಥಳೀಯ ಜನಪ್ರತಿನಿಧಿಯ ಮುಂದೆ ಅಳಲು ತೋಡಿಕೊಂಡಿದ್ದರು. ಆ ಬಳಿಕ ಅವರು ನಮ್ಮನ್ನು ಒಡನಾಡಿ ಸಂಸ್ಥೆಗೆ ಕಳುಹಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ಸಮಾಲೋಚನೆ ವೇಳೆ ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಸ್ಟಾಲಿನ್, ಇದೊಂದು ಸೂಕ್ಷ್ಮ ಹಾಗೂ ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಗೆ ಸಂಬಂಧಿಸಿದ ಪ್ರಕರಣ. ಆದ್ದರಿಂದ ಎಲ್ಲ ವಿಚಾರಗಳ ಮಾಹಿತಿ ಬಗ್ಗೆ ನೀಡಲು ಸಾಧ್ಯವಿಲ್ಲ. ಆದರೆ, ಈ ಪ್ರಕರಣ ಪೋಕ್ಸೋ ಕಾಯ್ದೆ ವ್ಯಾಪ್ತಿಯಲ್ಲಿ ಬರುವುದರಿಂದ ವಿಳಂಬ ಮಾಡದೇ ಬಾಲಕಿಯರು ನಮ್ಮ ಬಳಿ ಬಂದ ತಕ್ಷಣ ಸಮಾಲೋಚನೆ ನಡೆಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಮಾಹಿತಿ: ಈ ಆರೋಪದ ಬಗ್ಗೆ ಮೈಸೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚೇತನ್​ಗೆ ಮಾಹಿತಿ ನೀಡಲಾಗಿದೆ ಎಂದು ಒಡನಾಡಿ ಸೇವಾ ಸಂಸ್ಥೆಯ ಮತ್ತೊಬ್ಬ ನಿರ್ದೇಶಕ ಪರಶುರಾಮ ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ.

ಈ ಮಧ್ಯೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಚಂದ್ರಕುಮಾರ್​ ನೀಡಿದ ದೂರಿನ ಅನ್ವಯ ಮೈಸೂರಿನ ಠಾಣೆಯೊಂದರಲ್ಲಿ ಐವರ ವಿರುದ್ಧ ಪೋಕ್ಸೋ ಪ್ರಕರಣದ ಅಡಿ ಎಫ್​ಐಆರ್ ದಾಖಲಾಗಿದೆ.

Last Updated : Aug 27, 2022, 6:51 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.