ಮೈಸೂರು :ಮೈಸೂರು-ಕೊಡಗು ಲೋಕಸಭಾ ಚುನಾವಣೆಗೆ ನಾನು ಟಿಕೆಟ್ ಕೇಳಿದ್ದು ನಿಜ. ಆದರೆ, ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರವಿಲ್ಲವೆಂದು ಮಾಜಿ ಶಾಸಕ ವಾಸು ಹೇಳಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಆಕಾಂಕ್ಷೆ ಇಟ್ಟುಕೊಂಡಿದೆ. ಆದರೆ, ಪಕ್ಷದ ವರಿಷ್ಠರು ವಿಜಯಶಂಕರ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಈಗ ಅವರ ಪರವಾಗಿ ಕೆಲಸ ಮಾಡುತ್ತೀನಿ ಎಂದು ತಿಳಿಸಿದರು. ಸೋಮವಾರ ಪಕ್ಷದ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ನಾಮಪತ್ರ ಸಲ್ಲಿಸಲಿದ್ದಾರೆ. ಜೊತೆಯಲ್ಲಿ ಎರಡೂ ಪಕ್ಷದ ಮುಖಂಡರು ತೆರಳುತ್ತಿವಿ ಎಂದರು.