ಮೈಸೂರು: ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿಗೆ ತೆರಳಿದ್ದ ವೇಳೆ ಆನೆಯೊಂದು ಅವರನ್ನು ಬೆನ್ನಟ್ಟಿಕೊಂಡು ಬಂದಿರುವ ಘಟನೆ ನಡೆದಿದೆ. ಇಲ್ಲಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿನ ಅರಣ್ಯ ಸಿಬ್ಬಂದಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬಂದಿರುವ ದೃಶ್ಯ ಬೆಚ್ಚಿಬೀಳಿಸುವಂತಿದೆ.
ಜೀಪ್ನಲ್ಲಿ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ಆನೆ ಅಟ್ಟಾಡಿಸಿಕೊಂಡು ಬಂದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಅರಣ್ಯ ಸಿಬ್ಬಂದಿ ಬಹುದೊಡ್ಡ ಅನಾಹುತದಿಂದ ಪಾರಾಗಿದ್ದಾರೆ.
ಸುಮಾರು 100 ಮೀಟರ್ಗೂ ಹೆಚ್ಚು ದೂರ ಆನೆ ಅಟ್ಟಿಸಿಕೊಂಡು ಬಂದಿದ್ದು, ಬಳಿಕ ಸಿಬ್ಬಂದಿ ಅರಣ್ಯದೊಳಗಿಂದ ಹಿಂದಕ್ಕೆ ಮರಳಿದ್ದಾರೆ. ಆನೆ ಬೆದರಿಸಿರುವ ದೃಶ್ಯವನ್ನು ಸಿಬ್ಬಂದಿ ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.