ಮೈಸೂರು: ನಿತ್ರಾಣಗೊಂಡು ಬಿದ್ದಿದ್ದ ಅಪರಿಚಿತ ವೃದ್ಧನನ್ನು ಆಸ್ಪತ್ರೆಗೆ ದಾಖಲು ಮಾಡುವ ಮೂಲಕ ಗೋಳೂರು ಸ್ನೇಕ್ ಬಸವರಾಜ್ ಮಾನವೀಯತೆ ಮೆರೆದಿದ್ದಾರೆ. ನಂಜನಗೂಡು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವೃದ್ಧರೊಬ್ಬರು ನಿತ್ರಾಣಗೊಂಡು ಮಲಗಿದ್ದರು. ಇದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಂತರ ಗೋಳೂರು ಸ್ನೇಕ್ ಬಸವರಾಜ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಗೋಳೂರು ಸ್ನೇಕ್ ಬಸವರಾಜ್ ವ್ಯಕ್ತಿಯನ್ನು ಕಂಡು ಮರುಗಿದ್ದಾರೆ. ಸುಮಾರು 65 ವರ್ಷದ ವೃದ್ಧ ಕಾಯಿಲೆಯಿಂದ ಬಳಲುತ್ತಿದ್ದು, ನಿಲ್ದಾಣದಲ್ಲಿ ನಿತ್ರಾಣಗೊಂಡು ಮಲಗಿದ್ದರು.
ಆಂಬ್ಯುಲೆನ್ಸ್ಗೆ ಕರೆ ಮಾಡಿ ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇವರೊಂದಿಗೆ ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಸಾಥ್ ನೀಡಿದ್ದು, ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ದೊಡ್ಡಬಳ್ಳಾಪುರ ಜನಸ್ಪಂದನ ಕಾರ್ಯಕ್ರಮದಲ್ಲಿ ಹೃದಯಾಘಾತದಿಂದ ವೃದ್ಧ ಸಾವು