ಮೈಸೂರು: ಅಧಿಕಾರಿಗಳ ಕಿರುಕುಳದಿಂದ ಬೇಸತ್ತು, ಡೆತ್ ನೋಟ್ ಬರೆದಿಟ್ಟು ಅಂಗನವಾಡಿ ಕಾರ್ಯಕರ್ತೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಡಿಎಂಜಿ ಹಳ್ಳಿ ನಿವಾಸಿ ಪಿ. ಎನ್. ಸುಮತಿ ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ. ಮೈಸೂರು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ, ಎಸ್ಒಪಿ, ಡಿಡಿ ಹಾಗೂ ಅಂಗನವಾಡಿ ಕಾರ್ಯಕರ್ತೆಯಾದ ಲಲಿತರಾಣಿ ಹೆಸರನ್ನು ಡೆತ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸಿಡಿಪಿಒ ಮಂಜುಳಾ ಪಾಟೀಲ್, ಎಸ್ ಓಪಿ ಪಾರ್ವತಿ ನಾಯ್ಕ್, ಡಿಡಿ ಬಸವರಾಜು ವಿರುದ್ಧ ಗಂಭೀರ ಆರೋಪ ಮಾಡಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಲಲಿತಾರಾಣಿಯಿಂದ ನನಗೆ ತೊಂದರೆ ಮಾಡಿಸುತ್ತಿದ್ದಾರೆ.
ನನ್ನ ಮೇಲೆ ಇವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಇದರಿಂದ ನಮ್ಮ ಮನೆಯಲ್ಲಿ ಅಶಾಂತಿ ಉಂಟಾಗಿದೆ. ಗೌರವದಧನ ಸಭೆ, ವೃತ್ತ ಸಭೆಯಲ್ಲಿ ನನಗೆ ಅವಮಾನ ಮಾಡಿದ್ದಾರೆ. ನನಗೆ ಇವರು ಮಾನಸಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದರಿಂದ ನಾನು ಮನನೊಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ.
ಅಧಿಕಾರಿಗಳ ವಿರುದ್ಧ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿರುವ ಸುಮತಿಯನ್ನ ಚಿಕಿತ್ಸೆಗಾಗಿ ಮೈಸೂರಿನ ಕೆ. ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಸುಮತಿ ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ. ಈ ಅಧಿಕಾರಿಗಳು ಸುಮತಿಗೆ ಮಾನಸಿಕವಾಗಿ ತೊಂದರೆ ನೀಡಿದ್ದಾರೆ.
ಇಂತಹ ಘಟನೆ ಬೇರೆ ಎಲ್ಲಿಯೂ ನಡೆಯಬಾರದು. ಈ ಅಧಿಕಾರಿಗಳನ್ನು ಕೂಡಲೆ ಸರ್ಕಾರ ವರ್ಗಾವಣೆ ಮಾಡಲಿ. ಇಲ್ಲವಾದರೆ ನಾವು ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ದೊಡ್ಡಮಾರಗೌಡನಹಳ್ಳಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಓದಿ: ಡಿಕೆಶಿ ಸಿಎಂ ಆದ್ರೆ ರಾಜ್ಯವನ್ನೇ ಗೂಂಡಾ ರಾಜ್ಯವನ್ನಾಗಿ ಮಾಡುತ್ತಾರೆ: ರೇಣುಕಾಚಾರ್ಯ