ETV Bharat / state

ಪಶುಸಂಗೋಪನೆ ಹೆಚ್ಚಿದಷ್ಟೂ ರಾಜ್ಯದ ಆರ್ಥಿಕತೆ ಪ್ರಗತಿ ಕಾಣಲಿದೆ: ಸಿಎಂ ಸಿದ್ದರಾಮಯ್ಯ - ಉತ್ತನಹಳ್ಳಿ ಗ್ರಾಮದಲ್ಲಿ ನಡೆದ ಪಶು ಸಖಿಯರ ತರಬೇತಿ

ಮೈಸೂರು ಜಿಲ್ಲೆಯ ಉತ್ತನಹಳ್ಳಿ ಗ್ರಾಮದಲ್ಲಿ ನಡೆದ ಪಶುಸಖಿಯರ ತರಬೇತಿ ಕಾರ್ಯಕ್ರಮ, ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ನೂತನ ಪಶು ಚಿಕಿತ್ಸಾಲಯವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

CM Siddaramaiah inaugurated the programme.
ಪಶುಸಖಿಯರ ತರಬೇತಿ ಕಾರ್ಯಕ್ರಮ, ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
author img

By ETV Bharat Karnataka Team

Published : Sep 26, 2023, 4:25 PM IST

ಮೈಸೂರು:ಪಶುಸಂಗೋಪನೆ, ಗೋ ಸಂಪತ್ತು ಹೆಚ್ಚಿದಷ್ಟೂ ನಾಡಿನ ಸಂಪತ್ತು ವೃದ್ಧಿಯಾಗಿ ರಾಜ್ಯದ ಆರ್ಥಿಕತೆಯೂ ಪ್ರಗತಿ ಕಾಣುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸರ್ಕಾರಿ ಉತ್ತನಹಳ್ಳಿ ಗ್ರಾಮದಲ್ಲಿ ನಡೆದ ಪಶು ಸಖಿಯರ ತರಬೇತಿ ಕಾರ್ಯಕ್ರಮ, ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾಲು ಉತ್ಪಾದಕರು ಸಹಕಾರಿ ಕ್ಷೇತ್ರ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಹಾಲು ಒಕ್ಕೂಟಗಳು ರಚನೆಯಾಗಿದ್ದೇ ರೈತರ, ಹಾಲು ಉತ್ಪಾದಕರ ಶೋಷಣೆ ತಪ್ಪಿಸಲು. ಕೆಎಂಎಫ್ ಮತ್ತು ಡೈರಿಗಳಲ್ಲಿ ಅಧಿಕಾರಿಗಳ ಏಕ ಸ್ವಾಮ್ಯ ತಪ್ಪಿಸಲು ಹಾಲು ಒಕ್ಕೂಟಗಳಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಪಶುಸಂಗೋಪನಾ ಸಚಿವನಾಗಿದ್ದ ವೇಳೆ ಮಾಡಿದ್ದೆನು ಎಂದು ಸ್ಮರಿಸಿದರು.

ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇನ್ನಷ್ಟು ಹೆಚ್ಚಿಸಲು ಮತ್ತು ಅದನ್ನು ಮಾರಾಟ ಮಾಡುವುದಕ್ಕೂ ಸಾಕಷ್ಟು ಅವಕಾಶಗಳಿವೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿತ್ತು. ಆಗ ನಾನು ಕ್ಷೀರಭಾಗ್ಯ ಕಾರ್ಯಕ್ರಮವನ್ನು ಜಾರಿಗೆ ತಂದು ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ಜತೆಗೆ ರೈತರಿಗೆ ಪ್ರತಿ ಲೀಟರ್ ಗೆ 5ರೂ ಪ್ರೋತ್ಸಾಹದನದ ಮೂಲಕ ಅನುಕೂಲ ಆಗುವ ಕಾರ್ಯಕ್ರಮವನ್ನು ರೂಪಿಸಿದ್ದೆನು ಎಂದು ವಿವರಿಸಿದರು.

ನಾನು ಈ ಹಿಂದೆ ಪಶುಸಂಗೋಪನಾ ಸಚಿವನಾಗಿ ಮಾಡಿದ ಒಳ್ಳೆಯ ಕೆಲಸಗಳು ನನ್ನನ್ನು ಎರಡು ಬಾರಿ ಮುಖ್ಯಮಂತ್ರಿ ಆಗುವವರೆಗೂ ಕೈಹಿಡಿದಿವೆ. 14 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ನನ್ನನ್ನು ಚಾಮುಂಡೇಶ್ವರಿ, ವರುಣ ಮತ್ತು ಬಾದಾಮಿಯ ಮತದಾರರು 9 ಬಾರಿ ಗೆಲ್ಲಿಸಿದ್ದಾರೆ. ಪ್ರಜಾಪ್ರಭುತ್ವಕ್ಕೆ ಜನರೇ ನಿಜವಾದ ಮಾಲೀಕರು ಎಂದು ಕೃತಜ್ಞತೆ ಸಲ್ಲಿಸಿದರು.

ಪಶುಸಂಗೋಪನಾ ಇಲಾಖೆ ಕಾರ್ಯ ಯಶಸ್ವಿ: ಹಸು, ಎಮ್ಮೆ, ಕುರಿ, ಮೇಕೆ ತಳಿಗಳ ಉಳಿಸುವ ಮತ್ತು ಅಭಿವೃದ್ಧಿ ಪಡಿಸುವ ಹೊಣೆಗಾರಿಕೆಯನ್ನು ಪಶುಸಂಗೋಪನಾ ಇಲಾಖೆ ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಆಶಾ ಕಾರ್ಯಕರ್ತರು ಮಾಡುತ್ತಿರುವ ಉತ್ತಮ ಕಾರ್ಯವನ್ನು ಪಶು ಇಲಾಖೆಯಲ್ಲಿ ಪಶುಸಖಿಯರು ನಿರ್ವಹಿಸುತ್ತಾರೆ. ಅವರು ಪಶುಪಾಲಕರು, ರೈತರು ಮತ್ತು ಸರ್ಕಾರದ ನಡುವೆ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಾರೆ ಎಂದು ಮೆಚ್ಚುಗೆ ಸೂಚಿಸಿದರು.

ಸರ್ಕಾರ ರೈತರಿಗೆ, ಪಶುಪಾಲಕರಿಗೆ, ಕುರಿ, ಕೋಳಿ ಸಾಕಣೆದಾರರಿಗೆ ಹಲವು ಪ್ರಯೋಜನಕಾರಿ ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೆ ತಂದಿದೆ. ಆ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅಧ್ಯಕತೆ ವಹಿಸಿದ್ದರು. ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಶಾಸಕರಾದ ಸಿ ಅನಿಲ್ ಕುಮಾರ್, ಡಿ.ರವಿಶಂಕರ್, ಕೆ ಹರೀಶ್​​ಗೌಡ, ದರ್ಶನ್ ದ್ರುವನಾರಾಯಣ್, ಜಿ ಡಿ ಹರೀಶ್ ಗೌಡ ಮತ್ತು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ ಹಾಜರಿದ್ದರು.

ಇದನ್ನೂಓದಿ: ಜನಸಾಮಾನ್ಯರಿಗೆ ತೊಂದರೆಯಾಗದಂತೆ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.