ETV Bharat / state

ಯಾರೇ ಆದರೂ ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗಲೇಬೇಕು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

ನಿನ್ನೆ ಬಿಡುಗಡೆಯಾದ ಸಚಿವರ ಪಟ್ಟಿಯಲ್ಲಿ ಹೆಸರಿಲ್ಲದೇ ಇರುವುದನ್ನು ಕಂಡು ಕೆಲ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Former Chief Minister Veerappa Moily
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ
author img

By

Published : May 27, 2023, 3:00 PM IST

Updated : May 27, 2023, 3:23 PM IST

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

ಮೈಸೂರು: ಪಕ್ಷದಲ್ಲಿ ಯಾರು ಎಷ್ಟೇ ಹಿರಿಯರಾದರೂ ಹೈ ಕಮಾಂಡ್ ನಿರ್ಧಾರಕ್ಕೆ ತಲೆ ಬಾಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಬಿ ಕೆ. ಹರಿಪ್ರಸಾದ್ ಅವರ ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜಿನಾಮೆ ನೀಡುತ್ತೇನೆ ಎಂಬ ಹೇಳಿಕೆಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ರೈಲ್ವೆ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ವಿಧಾನ ಪರಿಷತ್ ಸದಸ್ಯ ಬಿ ಕೆ. ಹರಿಪ್ರಸಾದ್ ಅವರು, ತಮಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ತಾವು ಏನು ಹೇಳುತ್ತೀರಿ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ, ಬಿ ಕೆ. ಹರಿಪ್ರಸಾದ್ ಅವರಿಗೆ ಹೇಳುವಂತದ್ದು ಏನೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಎಷ್ಟೇ ಹಿರಿಯಾದರೂ, ಹೈ ಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಲೇಬೆಕು. ಅವರ ನಿರ್ಧಾರಕ್ಕೆ ತಲೆ ಬಾಗಲೇಬೇಕು ಎಂದು ವೀರಪ್ಪ ಮೊಯ್ಲಿ ಹೇಳಿದರು.

ಗ್ಯಾರಂಟಿಗೆ ಕೆಲವು ಮಾನದಂಡಗಳು ಇರುತ್ತವೆ: ಕಾಂಗ್ರೆಸ್ ಪಕ್ಷ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಈ ಗ್ಯಾರಂಟಿ ಯೋಜನೆಗಳು ಖಂಡಿತವಾಗಿ ಜಾರಿಗೆ ಬರುತ್ತವೆ. ಈ ವಿಚಾರದಲ್ಲಿ ಆತುರ ಬೇಡ. ಗ್ಯಾರಂಟಿ ಕೊಡುವುದು ಪಕ್ಷ ಅಲ್ಲ ಸರ್ಕಾರ. ಗ್ಯಾರಂಟಿ ಯೋಜನೆ ಜಾರಿಗೆ ಒಂದಿಷ್ಟು ಮಾನದಂಡಗಳು ಇರುತ್ತವೆ. ಅವುಗಳನ್ನು ಫಿಕ್ಸ್ ಮಾಡಿ ನಂತರ ಜಾರಿ ಮಾಡುತ್ತೇವೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

ರಾಜ್ಯದಲ್ಲಿ ಸಂಪೂರ್ಣ ಸಚಿವ ಸಂಪುಟ ಇದೆ. ಅದರಲ್ಲಿ ಸಿಎಂ, ಡಿಸಿಎಂ ಇದ್ದಾರೆ. ಸುಭದ್ರ ಸರ್ಕಾರ ಇದೆ. ರಾಜ್ಯದ ಜನರಿಗೆ ಉತ್ತಮ ಆಡಳಿತ ಕೊಡುತ್ತೇವೆ. ಪವರ್ ಷೇರಿಂಗ್ ಬಗ್ಗೆ ಈಗ ಯಾಕೆ ಚರ್ಚೆ ಎಂದು ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿದರು.

ತನ್ವೀರ್ ಬೆಂಬಲಿಗರ ಪ್ರತಿಭಟನೆ: ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ಸಿನ ತನ್ವೀರ್ ಸೇಠ್ ಹಿರಿಯರಾಗಿದ್ದು, ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರು ನಗರದ ಗಾಂಧಿ ವೃತ್ತದ ಬಳಿ ತನ್ವೀರ್ ಸೇಠ್ ಭಾವಚಿತ್ರಗಳನ್ನು ಹಿಡಿದು, ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಹಿರಿಯರಾದ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ‌ಹಾಗೂ ಶಾಸಕ ತನ್ವೀರ್ ಸೇಠ್ ಪರ ಘೋಷಣೆ ಕೂಗಿದರು.

ತನ್ವೀರ್ ಬೆಂಬಲಿಗರ ಪ್ರತಿಭಟನೆ

ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವ ವೇಳೆ ಎಂಟು ಮಂದಿ ಸಚಿವರಷ್ಟೇ ಪ್ರಮಾಣವಚನ ಸ್ವೀಕರಿಸಿದ್ದರು. ನಂತರದಲ್ಲಿ ಸಂಪುಟಕ್ಕೆ ಯಾರನ್ನೆಲ್ಲ ಸಚಿವರನ್ನಾಗಿ ಮಾಡಬೇಕು ಎಂಬುದರ ಬಗ್ಗೆ ಸಾಕಷ್ಟು ಚರ್ಚೆಗಳಾಗಿ, ಸಿಎಂ ಹಾಗೂ ಡಿಸಿಎಂ ಹೈಕಮಾಂಡ್​ ಜೊತೆ ಚರ್ಚಿಸಿ, ನಿನ್ನೆ ಪಟ್ಟಿಯನ್ನು ತಯಾರಿಸಿದೆ. ಆ ಹಿನ್ನೆಲೆ ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದ ಕೆಲ ಶಾಸಕರು ಪಟ್ಟಿಯಲ್ಲಿ ಹೆಸರಿಲ್ಲದೇ ಇರುವುದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಶಾಸಕ ತನ್ವೀರ್ ಸೇಠ್​ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Last Updated : May 27, 2023, 3:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.