ಮೈಸೂರು: ದೇವಾಲಯದ ಅಭಿವೃದ್ಧಿ ಕಾಮಗಾರಿ ಕೆಲಸ ನಡೆಯುತ್ತಿರುವ ಸಮಯವನ್ನು ನೋಡಿ ಕಳ್ಳರು ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ಕೆ.ಆರ್. ನಗರ ತಾಲೂಕಿನ ಅರ್ಕೇಶ್ವರ ದೇವಸ್ಥಾನದಲ್ಲಿ ನಡೆದಿದೆ.
ಕಳೆದ ಎರಡು ವಾರಗಳಿಂದ ಕೆ.ಆರ್. ನಗರ ತಾಲ್ಲೂಕಿನಲ್ಲಿರುವ ಮೂರು ದೇವಾಲಯಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದು, ನಿನ್ನೆ ರಾತ್ರಿ ಪ್ರಸಿದ್ಧ ಅರ್ಕೇಶ್ವರ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿ ದೇವಸ್ಥಾನದ ತಾಮ್ರದ ಧಾರಾಪತ್ರೆ, 1.5 ಅಡಿ ಎತ್ತರದ ತ್ರಿಶೂಲ, ತ್ರಾಮ ಮತ್ತು ಬೆಳ್ಳಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.
ದೇವಸ್ಥಾನದ ಕಾಮಗಾರಿ ನಡೆಯುತ್ತಿರುವ ವೇಳೆ ಭದ್ರತೆ ಇಲ್ಲದಿರುವುದನ್ನು ಗಮನಿಸಿರುವ ಕಳ್ಳರು ಈ ಕೃತ್ಯ ನಡೆಸಿದ್ದು, ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಕೆ.ಆರ್. ನಗರ ಪೊಲೀಸರು ಆಗಮಿಸಿ ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿಟಿವಿಯ ದೃಶ್ಯ ಪರಿಶೀಲನೆ ನಡೆಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಕಳ್ಳರ ಈ ಕೈಚಳಕ ಪೊಲೀಸರ ನಿದ್ದೆ ಕೆಡಿಸಿದೆ.