ಮೈಸೂರು: ಶೋಕಿಗಾಗಿ ಬೈಕ್ ಕಳ್ಳತನ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಉದಯಗಿರಿ ಪೋಲಿಸರು ಬಂಧಿಸಿದ್ದಾರೆ.
ಮೊಹಮದ್ ಶಿಯಾಜ್ ಮತ್ತು ಅರ್ಬಾಜ್ ಖಾನ್ ಬಂಧಿತರು. ಇವರು ಎರಡು ಲಕ್ಷ ರೂಪಾಯಿ ಬೆಲೆಯ ಬೈಕ್ ಕದ್ದು ಶೋಕಿಗಾಗಿ 20 ಸಾವಿರಕ್ಕೆ ಮಾರಾಟ ಮಾಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ.
ಬಂಧಿತರು ಮನೆಯ ಮುಂದೆ ನಿಲ್ಲಿಸಿದ ಬೈಕ್ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಂಧಿತರಿಂದ 10 ಲಕ್ಷ ಮೌಲ್ಯದ 8 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.