ETV Bharat / state

ಹೊಲದಲ್ಲಿ ತೆಂಗಿನ‌ಕಾಯಿಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್ - Arrest of seven for stealing coconuts

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ  ತೆಂಗಿನಕಾಯಿಗಳನ್ನು ಕಳ್ಳತನ‌ ಮಾಡುತ್ತಿದ್ದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

Arrest
Arrest
author img

By

Published : Sep 17, 2020, 2:30 PM IST

ಮೈಸೂರು: ಹಲವು ವರ್ಷಗಳಿಂದ ಹೊಲಗಳಲ್ಲಿ ತೆಂಗಿನಕಾಯಿ ಕಳ್ಳತನ‌ ಮಾಡುತ್ತಿದ್ದ ಕಳ್ಳರ ಗುಂಪನ್ನು ಸಾಲಿಗ್ರಾಮ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ ತೆಂಗಿನಕಾಯಿಗಳನ್ನು ಕಳ್ಳತನ‌ ಮಾಡುತ್ತಿದ್ದ ಪ್ರದೀಪ್, ಸೋಮಶೇಖರ್, ರಾಜು, ಪ್ರಜ್ವಲ್, ಮಹದೇವ್, ಯೋಗೇಶ್ ಮತ್ತು ಅಭಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀನಿನಲ್ಲಿ ತೆಂಗಿನಕಾಯಿ ಕಳ್ಳತನವಾಗುತ್ತಿದ್ದನ್ನು ಕಂಡು ಮಾಲೀಕರು ಸಾಲಿಗ್ರಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ, 60,000 ನಗದು ಹಾಗೂ 2 ಸರಕು ಆಟೋಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನು ಬಂಧಿತ ಆರೋಪಿಗಳ ಪೈಕಿ ಮೂವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.