ETV Bharat / state

ಕದ್ದ ಬೈಕ್ ಬಳಸಿ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಸುಲಿಗೆ: ಮೂವರ ಬಂಧನ

5 ದಿನಗಳ ಹಿಂದೆ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಕಾಮಗಾರಿ ಮಾಡುವ ಕೆಲಸಗಾರರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ, ಅವರನ್ನು ಹೆದರಿಸಿ ಮೊಬೈಲ್ ಫೋನ್ ಹಾಗೂ ಹಣ ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಸುಲಿಗೆಕೋರರನ್ನ ಪೊಲೀಸರು ಬಂಧಿಸಿದ್ದಾರೆ.

Arrest of three extortionists in Mysore
ಮೈಸೂರಿನಲ್ಲಿ ಮೂವರು ಸುಲಿಗೆಕೋರರ ಬಂಧನ
author img

By

Published : Nov 23, 2020, 1:07 PM IST

ಮೈಸೂರು: ಕದ್ದ ಬೈಕ್​​ ಬಳಸಿ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಒಡ್ಡಿ ಹಣ ವಸೂಲಿ ಮಾಡಿದ್ದ ಮೂವರು ಸುಲಿಗೆಕೋರರನ್ನ ಮೇಟಗಳ್ಳಿ ಪೊಲೀಸರು ಬಂಧಿಸಿದ್ದು, ಬೈಕ್ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ಶರತ್ ಅಲಿಯಾಸ್ ಮನು (19), ಶ್ರೀನಿವಾಸ ಅಲಿಯಾಸ್ ಮಂಜ (32) ಹಾಗೂ ಶರತ್ ಅಲಿಯಾಸ್ ಕ್ಯಾಟು (20) ಎಂಬುವವರು ಕಳೆದ 5 ದಿನಗಳ ಹಿಂದೆ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಕಾಮಗಾರಿ ಮಾಡುವ ಕೆಲಸಗಾರರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ, ಅವರನ್ನು ಹೆದರಿಸಿ ಮೊಬೈಲ್ ಫೋನ್ ಹಾಗೂ ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಾಗ ಈ ಮೂವರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸುಲಿಗೆ ಮಾಡಿರುವುದು ಗೊತ್ತಾಗಿದೆ. ಶರತ್ ಅಲಿಯಾಸ್ ಮನು ಎಂಬಾತ ಈ ಹಿಂದೆ ಹೊಳೆನರಸೀಪುರದಲ್ಲಿ ಬೈಕ್ ಕದ್ದಿದ್ದು, ಅದೇ ಬೈಕ್ ನಲ್ಲಿ ಇಲ್ಲಿ ಸುಲಿಗೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಪೊಲೀಸರು ಇವರಿಂದ ಎರಡು ಮೊಬೈಲ್ ಫೋನ್ ಗಳು, 400 ನಗದು ಹಾಗೂ ಈ ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಂಡು ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.