ಮೈಸೂರು: ನಮ್ಮ ದುಡಿಮೆಗೆ ಸರಿಯಾಗಿ ವೇತನ ಸಿಗುತ್ತಿಲ್ಲ, ಕೂಡಲೇ ಸರ್ಕಾರ ನಮಗೆ 12000 ರೂಪಾಯಿ ವೇತನ ನಿಗದಿಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮಳೆಯಲ್ಲೇ ಜಾಥ ನಡೆಸಿ, ಡಿಸಿ ಕಚೇರಿಯ ಎದುರು ಸುಮಾರು ೨೦೦೦ ಆಶಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಾವು ಮಾಡುತ್ತಿರುವ ಕೆಲಸಕ್ಕೆ ಸರಿಯಾಗಿ ವೇತನ ಸಿಗುತ್ತಿಲ್ಲ, ಈಗಿರುವ ವೇತನದಲ್ಲಿ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡರು.
ರಾಜ್ಯದಲ್ಲಿ ೪೫೦೦೦ ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿದ್ದು, ಮೈಸೂರು ಜಿಲ್ಲೆಯಲ್ಲಿ ಸುಮಾರು ೨ ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಕೂಡಲೇ ಸರ್ಕಾರ ಎಲ್ಲರಿಗೂ ತಿಂಗಳಿಗೆ ೧೨ ಸಾವಿರ ವೇತನ ನಿಗದಿ ಮಾಡಬೇಕು. ಇಲ್ಲದಿದ್ದರೆ ಜುಲೈ ೧೮ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ರವಾನಿಸಿದರು.