ETV Bharat / state

ಚಾಮುಂಡೇಶ್ವರಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್ - ಗಂಧದ ಗುಡಿ

'ಗಂಧದ ಗುಡಿ' ಚಿತ್ರ ಬಿಡುಗಡೆ ಹಿನ್ನೆಲೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

Ashwini Puneeth Rajkumar Visits Chamundi Hills
ಚಾಮುಂಡೇಶ್ವರಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
author img

By

Published : Oct 28, 2022, 12:12 PM IST

ಮೈಸೂರು: ಇಂದು ದಿ.ಪುನೀತ್ ರಾಜ್​​ಕುಮಾರ್ ಅಭಿನಯದ ಕೊನೆಯ ಚಿತ್ರ 'ಗಂಧದ ಗುಡಿ' ಬಿಡುಗಡೆ ಆಗಿದೆ. ಈ ಹಿನ್ನೆಲೆ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡೇಶ್ವರಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ಇಂದು ಬೆಳಗ್ಗೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿ, ನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಟ ಪುನೀತ್ ರಾಜ್​​ಕುಮಾರ್ ಸಹ ಚಾಮುಂಡೇಶ್ವರಿಯ ಪರಮ ಭಕ್ತರಾಗಿದ್ದರು. ಯಾವುದೇ ಸಿನಿಮಾ ಶೂಟಿಂಗ್​ಗಾಗಿ ಮೈಸೂರಿಗೆ ಆಗಮಿಸಿದಾಗ ಹಾಗೂ ಯಾವುದೇ ಹೊಸ ಚಿತ್ರ ಬಿಡುಗಡೆಯಾದಾಗ ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯುತ್ತಿದ್ದರು.

ಇದನ್ನೂ ಓದಿ: ವಿಶ್ವಾದ್ಯಂತ ತೆರೆಗೆ ಅಪ್ಪಳಿಸಿದ ಗಂಧದ ಗುಡಿ.. ಅಭಿಮಾನಿಗಳ ಜೊತೆ ರಾಘಣ್ಣ ಡ್ಯಾನ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.